ADVERTISEMENT

ಸಾದರ ಸಮುದಾಯಕ್ಕೆ ಶಿಕ್ಷಣ ಕೊರತೆ: ವಿಷಾದ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2012, 19:30 IST
Last Updated 7 ಅಕ್ಟೋಬರ್ 2012, 19:30 IST

ಗೌರಿಬಿದನೂರು: ಹಿಂದೂ ಸಾದರ ಸಮುದಾಯವರು ತಾಲ್ಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲಿದ್ದು, ಆ ಪೈಕಿ ಶೇ 90ರಷ್ಟು ಕುಟುಂಬದಲ್ಲಿ ಆರ್ಥಿಕ ಸಮಸ್ಯೆಗಳಿಂದ ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹಿಂದೂ ಸಾದರ ಕ್ಷೇಮಾಭಿವೃದ್ಧಿ ಕೇಂದ್ರ ಸಂಘದ ಅಧ್ಯಕ್ಷ ಡಿ.ರಾಮಯ್ಯ ವಿಷಾದಿಸಿದರು.

ತಾಲ್ಲೂಕು ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘ, ಹಿಂದೂ ಸಾದರ ನೌಕರರ ಸಂಘದ ವತಿಯಿಂದ ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಆರ್.ನರಸಿಂಹಮೂರ್ತಿ, ~ನನ್ನ ಶಕ್ತಿ ಮೀರಿ ಉತ್ತಮ ಕೆಲಸಗಳನ್ನು ನಿರ್ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ~ ಎಂದರು.

ತಾಲ್ಲೂಕು ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಂಜುಂಡಗೌಡ, ಉಪಾಧ್ಯಕ್ಷ ಜಿ.ವಿ.ಕೃಷ್ಣಮೂರ್ತಿ, ಸಾದರ ನೌಕರರ ಸಂಘದ ಅಧ್ಯಕ್ಷ ದೇವರಾಜಯ್ಯ, ನಿವೃತ್ತ ಪ್ರಾಧ್ಯಾಪಕ ದೊಡ್ಡೇಗೌಡ, ವಕೀಲ ಸಣ್ಣಕ್ಕಿ ವೆಂಕಟರವಣಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಶಿವಶಂಕರ್, ಶ್ರೀನಿವಾಸ್, ಮಂಜುನಾಥ್, ಗಂಗಾಧರಯ್ಯ, ಸಾವಿತ್ರಮ್ಮ, ಹೊನ್ನಪ್ಪ, ನರಸಿಂಹಮೂರ್ತಿ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಡಾ.ಕೋಡಿರಂಗಪ್ಪ, ಪಿ.ಟಿ. ಶ್ರೀನಿವಾಸ್, ಗಂಗಾಧರಯ್ಯ ಮತ್ತಿತರರನ್ನು ಅಭಿನಂದಿಸಲಾಯಿತು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.