ಗೌರಿಬಿದನೂರು: ಸಾಲ ಬಾಧೆಯಿಂದ ರೈತ ತಮ್ಮ ಹೊಲದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ತಾಲ್ಲೂಕಿನ ಹಿರೇಬಿದನೂರು ಗ್ರಾಮದ ರೈತ ಶ್ರೀನಿವಾಸ್ (32) ಆತ್ಮಹತ್ಯೆ ಮಾಡಿಕೊಂಡವರು.
ಶ್ರೀನಿವಾಶ್ ಸಾಲ ಮಾಡಿಕೊಂಡಿದ್ದರು. ನಿಗದಿತ ಅವಧಿಯೊಳಗೆ ಸಾಲ ತೀರಿಸಲು ಆಗಿರಲಿಲ್ಲ. ಇದರಿಂದ ಮನನೊಂದು ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.