ADVERTISEMENT

ಸಾಲ ಬಾಧೆ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2012, 19:30 IST
Last Updated 25 ಮಾರ್ಚ್ 2012, 19:30 IST

ಮದ್ದೂರು: ಸಾಲದ ಬಾಧೆ ತಾಳಲಾರದೆ ರೈತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ವಳೆಗೆರೆಹಳ್ಳಿಯಲ್ಲಿ ಭಾನುವಾರ ನಡೆದಿದೆ.

ಗ್ರಾಮದ ಕರಿನಾಥೇಗೌಡರ ಮಗ ಸತೀಶ್ (40) ನೇಣಿಗೆ ಶರಣಾದ ರೈತ. ಇವರು ಕೃಷಿಗೆಂದು ಗ್ರಾಮದ ಪತ್ತಿನ ಸಹಕಾರ ಸಂಘದಿಂದ 35 ಸಾವಿರ ರೂಪಾಯಿ ಸಾಲ ಪಡೆದಿದ್ದರು. ಅಲ್ಲದೆ ಜಮೀನಿನ ಕ್ರಯ ಕರಾರು ಮೇಲೆ ಖಾಸಗಿಯವರಿಂದ 3.15 ಲಕ್ಷ ರೂಪಾಯಿ ಸಾಲ ಪಡೆದಿದ್ದರು.

ಸಾಲಗಾರರ ಉಪಟಳ ಹೆಚ್ಚಿದ್ದರಿಂದ ಭಾನುವಾರ ಬೆಳಿಗ್ಗೆ 8.30ರ ಸಮಯದಲ್ಲಿ ಮನೆಯ ಕೊಠಡಿಯ ತೊಲೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡರು ಎನ್ನಲಾಗಿದೆ. ಅವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.