ರಾಯಚೂರು: ತಾಲ್ಲೂಕಿನ ಮಿಡಗಲದಿನ್ನಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ರೈತ ರಾಮಯ್ಯ (55) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರಿಗೆ ಪತ್ನಿ, ಮೂವರುಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.ರಾಮಯ್ಯ 4 ಎಕರೆ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿ ಹತ್ತಿ ಬೆಳೆದಿದ್ದರು. ಕೊಳವೆಬಾವಿ ಬತ್ತಿದ್ದರಿಂದ ಹತ್ತಿ ಬೆಳೆ ಒಣಗಿ ನಷ್ಟವಾಗಿತ್ತು. ಒಂದು ಲಕ್ಷ ರೂಪಾಯಿ ಬೆಳೆ ಸಾಲ ಪಡೆದಿದ್ದರು. ಸಾಲ ಮರುಪಾವತಿಗೆ ಬ್ಯಾಂಕ್‌ನವರು ನೋಟಿಸ್ ಕಳುಹಿಸಿದ್ದರು ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.