ADVERTISEMENT

ಸಿಂದಗಿ ಪಾಕ್ ಧ್ವಜ ಪ್ರಕರಣ :ಶೀಘ್ರ ಆರೋಪ ಪಟ್ಟಿ ಸಲ್ಲಿಕೆ: ಐಜಿಪಿ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2012, 19:30 IST
Last Updated 17 ಮಾರ್ಚ್ 2012, 19:30 IST

ವಿಜಾಪುರ: `ಸಿಂದಗಿಯಲ್ಲಿ ಪಾಕ್ ಧ್ವಜ ಹಾರಿಸಿದ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಶೀಘ್ರವೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗುವುದು~ ಎಂದು ಉತ್ತರ ವಲಯ ಐಜಿಪಿ ಕೆ.ಎಸ್.ಆರ್. ಚರಣ್ ರೆಡ್ಡಿ ಹೇಳಿದರು.

ಜಿಲ್ಲೆಗೆ ಭೇಟಿ ನೀಡಿದ್ದ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. `ಐಪಿಸಿ ಕಲಂ 153 (ಎ) ಅಡಿಯಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲು ಸರ್ಕಾರದ ಪೂರ್ವಾನುಮತಿಯ ಅಗತ್ಯವಿದೆ. ಸರ್ಕಾರದಿಂದ ಅನುಮತಿ ಬರಬೇಕಿದೆ.

ಘಟನೆ ನಡೆದು 90 ದಿನಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಬೇಕಿದ್ದು, ಅದಕ್ಕೆ ಇನ್ನೂ ಎರಡು ವಾರ ಕಾಲಾವಕಾಶವಿದೆ. ಒಂದೊಮ್ಮೆ ಸರ್ಕಾರದ ಅನುಮತಿ ತಕ್ಷಣಕ್ಕೆ ದೊರೆಯದಿದ್ದರೂ ಅದನ್ನು ಬಾಕಿ ಇಟ್ಟು ದೋಷಾರೋಪ ಪಟ್ಟಿ ಸಲ್ಲಿಸುತ್ತೇವೆ~ ಎಂದರು.

`ವಿಜಾಪುರದ ಗೋಲಗುಮ್ಮಟ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಆರಂಭಗೊಂಡಿದೆ~ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.