ADVERTISEMENT

ಸಿಇಟಿ ವಿದ್ಯಾರ್ಥಿಗಳಿಗೆ ದೂರದರ್ಶನದ ಮೂಲಕ ತರಬೇತಿ

​ಪ್ರಜಾವಾಣಿ ವಾರ್ತೆ
Published 26 ಜನವರಿ 2012, 19:30 IST
Last Updated 26 ಜನವರಿ 2012, 19:30 IST

ಉಡುಪಿ: ರಾಜ್ಯದ ಪದವಿ ಪೂರ್ವ ಹಾಗೂ ಸಿಇಟಿ ವಿದ್ಯಾರ್ಥಿಗಳಿಗೆ ದೂರದರ್ಶನದ ಮೂಲಕ ತರಬೇತಿ ನೀಡುವ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ರೂಪಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಸಚಿವ ವಿ.ಎಸ್.ಆಚಾರ್ಯ ಅವರು ಹೇಳಿದರು.

ನಗರದ ಅಜ್ಜರಕಾಡು ಮೈದಾನದಲ್ಲಿ ಗುರುವಾರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ಅವರು, ಒಂದು ವಾರದೊಳಗೆ ಈ ಕಾರ್ಯಕ್ರಮದ ಪ್ರಸಾರ ಆರಂಭಗೊಳ್ಳಲಿದೆ  ಎಂದು ಹೇಳಿದರು.

`ಸರ್ವಶಿಕ್ಷಣ ಅಭಿಯಾನದ ಕಾರ್ಯಚಟುವಟಿಕೆಗಳಿಗಾಗಿ ಈವರೆಗೆ ರೂ. 7.98 ಕೋಟಿ ವೆಚ್ಚ ಮಾಡಲಾಗಿದೆ. ಶಾಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸೈಕಲ್ ವಿತರಣೆ ಯೋಜನೆಯನ್ನು ಇನ್ನಷ್ಟು ಉತ್ತಮಪಡಿಸಿ ಮುಂದುವರಿಸಲಾಗುತ್ತಿದೆ~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.