ADVERTISEMENT

ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2011, 19:30 IST
Last Updated 15 ಏಪ್ರಿಲ್ 2011, 19:30 IST

ದೇವನಹಳ್ಳಿ : ತಾಲ್ಲೂಕಿನ ಕೋಡಗುರ್ಕಿ ಗ್ರಾಮದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ಸಿಮೆಂಟ್ ರಸ್ತೆ ಕಾಮಗಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿ.ಜೆ.ಪಿ. ಮಹಿಳಾ ಮೋರ್ಚಾ ಕಾರ್ಯದರ್ಶಿ ಎಂ.ಸಿ.ಪ್ರಭಾವತಿ ಮುನೇಗೌಡ ಶುಕ್ರವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸರ್ಕಾರದ ವಿವಿಧ ಇಲಾಖೆ ಸೌಲಭ್ಯಗಳು ಮತ್ತು ಜನಪರ ಯೋಜನೆಗಳ ಬಗ್ಗೆ ಗ್ರಾಮೀಣ ಮಹಿಳೆಯರು ಅರಿತುಕೊಳ್ಳಬೇಕು ಎಂದರು. ಮಹಿಳೆಯರು ಪುರುಷರಷ್ಟೇ ಸಮಾನರು ಎಂಬುದನ್ನು ಪ್ರತಿ ಹಂತದಲ್ಲೂ ತೋರಿಸಬೇಕು ಎಂದರು. ಬಿಜಿಪಿ ಕಾರ್ಯಕರ್ತೆ ರೂಪ ಚಂದ್ರಗೌಡ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.