ADVERTISEMENT

ಸುಳ್ಳು ಸುದ್ದಿ ಬಿತ್ತರಿಸಿದ್ದೂ ಖಂಡನಾರ್ಹ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2012, 19:30 IST
Last Updated 3 ಮಾರ್ಚ್ 2012, 19:30 IST

ಶಿವಮೊಗ್ಗ: ಮಾಧ್ಯಮಗಳ ಮೇಲೆ ವಕೀಲರು ನಡೆಸಿದ ಕೃತ್ಯಯಾವುದೇ ನಾಗರಿಕ ಸಮಾಜ ಒಪ್ಪುವುದಿಲ್ಲ. ಇದೊಂದು ರಾಕ್ಷಸೀ ಕೃತ್ಯ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎ. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾವಂತರೇ ಈ ರೀತಿ ಗೂಂಡಾಗಳಂತೆ ನಡೆದುಕೊಂಡರೆ ರಾಜ್ಯದ ರಕ್ಷಣೆ ಮಾಡುವವರು ಯಾರು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ಘಟನೆ ಸಂಬಂಧಿಸಿದಂತೆ ಸರ್ಕಾರ ನ್ಯಾಯಾಂಗ ತನಿಖೆಗೆ ಮುಂದಾಗಿರುವುದು ಸ್ವಾಗತಾರ್ಹ ಎಂದ ಅವರು, ಘಟನೆ ಕುರಿತಂತೆ ಸಂಬಂಧಪಟ್ಟ ವಕೀಲರ ಸಂಘಗಳೇ ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದರು.

ಹಾಗೆಯೇ, ಮಾಧ್ಯಮಗಳಲ್ಲಿ ಹಸಿ, ಹಸಿ ಸುಳ್ಳು ಸುದ್ದಿಗಳನ್ನು ಬಿತ್ತರಿಸಿದ್ದೂ ಕೂಡ ಅಷ್ಟೆ ಖಂಡನಾರ್ಹ ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಲ್ಲಿ ಪೊಲೀಸರು ಸತ್ತಿದ್ದಾರೆಂದು ಕೆಲ ಮಾಧ್ಯಮಗಳು ತಪ್ಪು ಸುದ್ದಿ ಬಿತ್ತರಿಸಿದವು. 

ಸುಳ್ಳು ಸುದ್ದಿ ಬಿತ್ತರಿಸುವುದು ಮನುಷ್ಯರ ಕೆಲಸ ಅಲ್ಲ ಎಂದ ಅವರು, ಇಂತಹ ಪ್ರವೃತ್ತಿ ವಿರುದ್ಧ ಮಾಧ್ಯಮ ಸಂಘಗಳೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ವ್ಯವಸ್ಥಿತ ಪಿತೂರಿ: ಯಡಿಯೂರಪ್ಪ

ಶಿವಮೊಗ್ಗ: ವಕೀಲರು ಮಾಧ್ಯಮಗಳ ನಡೆಸಿದ ಹಲ್ಲೆ ಘಟನೆಯನ್ನು ಖಂಡಿಸಿದ ಅವರು, ಇದರ ಹಿಂದೆ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ವ್ಯವಸ್ಥಿತ ಪಿತೂರಿ ನಡೆದಿದೆ. ತನಿಖೆ ನಂತರ ಇದು ಸ್ಪಷ್ಟವಾಗಲಿದೆ ಎಂದು ಯಡಿಯೂರಪ್ಪ ಶನಿವಾರ ಇಲ್ಲಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ತಾವು ಈಗಾಗಲೇ ಗೃಹ ಸಚಿವ ಆರ್. ಅಶೋಕ್ ಜತೆ ಮಾತನಾಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ ಎಂದರು.


 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.