ADVERTISEMENT

ಸೆಸ್ಕ್ ಕಚೇರಿಗೆ ರೈತರಿಂದ ಬೀಗ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 19:30 IST
Last Updated 1 ಅಕ್ಟೋಬರ್ 2012, 19:30 IST
ಸೆಸ್ಕ್ ಕಚೇರಿಗೆ ರೈತರಿಂದ ಬೀಗ
ಸೆಸ್ಕ್ ಕಚೇರಿಗೆ ರೈತರಿಂದ ಬೀಗ   

ಬೇಲೂರು:  ವಿದ್ಯುತ್ ಅಭಾವ ಸೇರಿಹಲವು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಇಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪೆನಿ (ಸೆಸ್ಕ್) ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದರು.

ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸರ್ಕಾರ ವಿಫಲವಾಗಿದೆ.  ತಾಲ್ಲೂಕಿನಾದ್ಯಂತ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ ಕಚೇರಿ ಸಿಬ್ಬಂದಿಗಳನ್ನು ಹೊರಗೆ ಕಳುಹಿಸಿ ಬೀಗ ಹಾಕಿ ಸರ್ಕಾರ, ಅಧಿಕಾರಿಗಳ ವಿರುದ್ಧ  ಘೋಷಣೆ ಕೂಗಿದರು.

ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು  ಪಟ್ಟು ಹಿಡಿದರು. ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂತೆಗೆದುಕೊಂಡರು. ಬಳಿಕ ತಾಲ್ಲೂಕು ಕಚೇರಿ ಬಳಿ ಕೆಲಕಾಲ ಧರಣಿ ನಡೆಸಿದರು. ರೈತ ಸಂಘದ ಭೋಗ ಮಲ್ಲೇಶ್ ಮಾತನಾಡಿದರು. ತಾಲ್ಲೂಕು ರೈತ ಸಂಘದ ಅಧ್ಯಕ್ಷ ಪರಮೇಶ್,  ಸ್ವಾಮಿಗೌಡ, ಪದ್ಮಪ್ರಭು, ಜೆ.ಡಿ. ಮಲ್ಲಿಕಾರ್ಜುನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.