ADVERTISEMENT

ಸೇವಾಬಾಯರ ಜಯಂತಿ; ಅದ್ದೂರಿ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2011, 18:30 IST
Last Updated 16 ಫೆಬ್ರುವರಿ 2011, 18:30 IST

ಶಿವಮೊಗ್ಗ: ಧರ್ಮಗುರು ಸೇವಾಬಾಯರ 272ನೇ ಜಯಂತಿ ಅಂಗವಾಗಿ ನಗರದಲ್ಲಿ ಬುಧವಾರ ಅದ್ದೂರಿ ಮೆರವಣಿಗೆ ನಡೆಯಿತು.ಮೆರವಣಿಗೆ ಉದ್ದಕ್ಕೂ ನೃತ್ಯ, ಕೋಲಾಟ, ಡೊಳ್ಳು ಕುಣಿತ, ಸಮಾಜದ ಮಹಿಳೆಯರು ಸಂಪ್ರದಾಯ ಉಡುಗೆಯಲ್ಲಿ ಪ್ರದರ್ಶಿಸಿದ ಲಂಬಾಣಿ ನೃತ್ಯ ಮತ್ತು ಪದಗಳು, ಕೋಲಾಟ ಗಮನ ಸೆಳೆದವು.

ಸೇವಾಬಾಯರ ಭಾವಚಿತ್ರ ಹೊತ್ತ ಮೆರವಣಿಗೆ ನಗರದ ಸೈನ್ಸ್ ಮೈದಾನದಿಂದ ಹೊರಟು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾ ಬಂಜಾರ ಸಮುದಾಯ ಭವನಕ್ಕೆ ಸಮಾಪನಗೊಂಡಿತು.ಲಂಬಾಣಿ ಗುರುಪೀಠದ ಸರದಾರ್ ಸೇವಾಲಾಲ್ ಸ್ವಾಮೀಜಿ, ರಾಜ್ಯ ಬಂಜಾರ ನಿಗಮದ ಅಧ್ಯಕ್ಷ ಬಸವರಾಜ್ ನಾಯ್ಕ, ಬಂಜಾರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭೋಜಾನಾಯ್ಕ ಮೊದಲಾದ ಮುಖಂಡರು ಪಾಲ್ಗೊಂಡಿದ್ದರು.

ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಯು. ಚಂದ್ರಾನಾಯ್ಕ ಮಾತನಾಡಿದರು. ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಜಿಲ್ಲಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಮೇಶ್, ಜಿಲ್ಲಾ ಬಂಜಾರ ಮಹಿಳಾ ಸಂಘದ ಅಧ್ಯಕ್ಷೆ ಸಾಕಮ್ಮ ಮತ್ತಿತರರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಸೇವಾಬಾಯರ ದೇವಸ್ಥಾನದ ಶಂಕು ಸ್ಥಾಪನೆ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.