ಶಿವಮೊಗ್ಗ: ನಗರಸಭೆ ವತಿಯಿಂದ ನಗರದ 35 ವಾರ್ಡ್‌ಗಳಲ್ಲಿ ಸೊಳ್ಳೆ ನಿಯಂತ್ರಿಸಲು ಸಹಾಯಕವಾಗುವ ಗಪ್ಪಿ ಮೀನು ಮರಿಗಳನ್ನು ಬಿಡಲು ಉದ್ದೇಶಿಸಲಾಗಿದೆ ಎಂದು ನಗರಸಭಾ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ ಹೇಳಿದರು.
ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಶಿಕ್ಷಕರ ತರಬೇತಿ ಕೇಂದ್ರದ ಎನ್‌ಎಸ್‌ಎಸ್ ಮತ್ತು ನಗರಸಭೆ ಸಂಯುಕ್ತವಾಗಿ ಶಿಕ್ಷಕರ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಶುಕ್ರವಾರ ಮಲೇರಿಯಾ ವಿರೋಧ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚನ್ನಬಸಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಸೊಳ್ಳೆಗಳಿಂದ ಹರಡಬಹುದಾದ ಮಲೇರಿಯಾ, ಡೆಂಗೆ, ಚಿಕುನ್‌ಗುನ್ಯ, ಮೆದುಳುಜ್ವರ ಮತ್ತು ಆನೆಕಾಲು ರೋಗ ನಿಯಂತ್ರಣಕ್ಕೆ ಸರ್ಕಾರ ರೂಪಿಸುವ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.
ಡಯಟ್ ಪ್ರಾಂಶುಪಾಲರಾದ ಚಂದ್ರಮ್ಮ ಮಾತನಾಡಿದರು. ಪೌರಾಯುಕ್ತ ಪಿ.ಜಿ. ರಮೇಶ್, ಕೀಟಜನ್ಯ ರೋಗ ನಿಯಂತ್ರಣ ಅಧಿಕಾರಿ ಜೆ.ಆರ್. ರುದ್ರಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದಿನೇಶ್, ಆರೋಗ್ಯ ಶಿಕ್ಷಣಾಧಿಕಾರಿ ಜಗದೀಶ್, ಡಯಟ್ ಉಪನ್ಯಾಸಕ ರಾಮಲಿಂಗಪ್ಪ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.