ADVERTISEMENT

ಹುತಾತ್ಮ ಪೊಲೀಸರಿಗೆ ನಮನ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2011, 19:30 IST
Last Updated 21 ಅಕ್ಟೋಬರ್ 2011, 19:30 IST

ಕೋಲಾರ: ದೇಶಕ್ಕಾಗಿ ಕಾರ್ಯನಿರ್ವಹಿಸುವ ಸಮಯದಲ್ಲಿ ಮೃತರಾಗುವ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸುವುದು ಎಲ್ಲ ನಾಗರಿಕರ ಕರ್ತವ್ಯ ಎಂದು ಜಿಲ್ಲಾಧಿಕಾರಿ ಮನೋಜ್‌ಕುಮಾರ್ ಮೀನಾ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಪೊಲೀಸ್ ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಪಾಲ್ಗೊಂಡು ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿದ ಬಳಿಕ ಮಾತನಾಡಿದ ಅವರು, ಪೋಲೀಸರು ಪ್ರಾಣದ ಹಂಗು ತೊರೆದು ಹೋರಾಡುತ್ತಾರೆ. ಈ ವರ್ಷ 634 ಪೊಲೀಸರು ಕರ್ತವ್ಯನಿರತರಾಗಿದ್ದಾಗ ಪ್ರಾಣತ್ಯಾಗ ಮಾಡಿದ್ದಾರೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ತ್ಯಾಗರಾಜನ್ ಹುತಾತ್ಮ ಪೊಲೀಸರ ಪಟ್ಟಿ ಓದಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಚ್.ಆರ್.ಭಗವಾನ್‌ದಾಸ್, ನ್ಯಾಯಾಧೀಶ ವೀರಣ್ಣ ಜಿ.ತಿಗಡಿ, ನಗರಸಭೆ ಅಧ್ಯಕ್ಷೆ ನಾಜಿಯಾ, ತಹಶೀಲ್ದಾರ್ ಡಾ.ದಯಾನಂದ್, ಲೋಕಾಯುಕ್ತ ಡಿವೈಎಸ್‌ಪಿ ನಾಗರಾಜ್, ನಿವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ ಶಾಂತಪ್ಪ, ಡಿವೈಎಸ್‌ಪಿ ರಾಜಣ್ಣ ಇತರರು ಹುತಾತ್ಮರಿಗೆ ನಮನ ಸಲ್ಲಿಸಿದರು.
ಸಶಸ್ತ್ರ ಮೀಸಲು ಪಡೆಯ ಇನ್ಸ್‌ಪೆಕ್ಟರ್ ನಾಗರಾಜ್ ನೇತೃತ್ವದ ತಂಡ ಪಥ ಸಂಚಲನ ನಡೆಸಿ ಗೌರವ ವಂದನೆ ಸಲ್ಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.