ADVERTISEMENT

ಹುತಾತ್ಮ ಪೊಲೀಸರಿಗೆ ಭಾವಪೂರ್ಣ ಶ್ರದ್ಧಾಂಜಲಿ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2012, 19:30 IST
Last Updated 21 ಅಕ್ಟೋಬರ್ 2012, 19:30 IST

ಮಡಿಕೇರಿ:  ನಾಗರಿಕರ ರಕ್ಷಣೆ ಮತ್ತು ಶಾಂತಿ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ತರವಾದುದು ಎಂದು ಜಿಲ್ಲಾಧಿಕಾರಿ ಡಾ.ಎನ್.ವಿ.ಪ್ರಸಾದ್ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ.ಎನ್.ವಿ.ಪ್ರಸಾದ್, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಅಣ್ಣಿಗೇರಿ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಅಪ್ಪಯ್ಯ, ಗೃಹ ರಕ್ಷಕ ದಳದ ಕಮಾಂಡೆಂಟ್ ಚಿಂಗಪ್ಪ, ನಿವೃತ್ತ ಪೊಲೀಸ್ ಅಧಿಕಾರಿಗಳಾದ ಪೂಣಚ್ಚ, ಅಚ್ಚಪ್ಪ, ಸೋಮಣ್ಣ, ಎಂ.ಪಿ.ಮಂದಣ್ಣ, ಉಪ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಜೀವ್ ಮಾಂಗ್, ದುಗಪ್ಪ, ವರ್ಮ, ಪೊಲೀಸ್ ಅಧಿಕಾರಿಗಳಾದ ಸಿ.ಕೆ.ಅಪ್ಪಾಜಿ, ಚಿಣ್ಣಪ್ಪ ಎಂ.ಕೆ.ಕಾವೇರಪ್ಪ, ರಾಮಚಂದ್ರ, ಸಹಾಯಕ ವಾರ್ತಾಧಿಕಾರಿ ಚಿನ್ನಸ್ವಾಮಿ, ಪ್ರೊಬೆಷನರಿ ಪಿಎಸ್‌ಐ ಪ್ರಶೀಲಾ ಇತರರು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು.

2011-12ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸುವಾಗ ದೇಶದಲ್ಲಿ ಪ್ರಾಣ ಕಳೆದುಕೊಂಡ ಸುಮಾರು 570 ಪೊಲೀಸ್ ಅಧಿಕಾರಿಗಳು ಮತ್ತು ಪೇದೆಗಳ ವಿವರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಅಣ್ಣಗೇರಿ ಓದಿದರು.
ಇನ್‌ಸ್ಪೆಕ್ಟರ್ ಎಚ್.ಎಸ್.ಜಯಕೃಷ್ಣ ನೇತೃತ್ವದ ಪೊಲೀಸ್ ಮೀಸಲು ಪಡೆ, ಸಶಸ್ತ್ರ ಮೀಸಲು ಪಡೆಯಿಂದ ಮೂರು ಸುತ್ತು ಕುಶಾಲುತೋಪು ಹಾರಿಸಿ ಗೌರವ ಅರ್ಪಿಸಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.