ADVERTISEMENT

ಹುಬ್ಬಳ್ಳಿ ವಿಮಾನ ಪ್ರಯಾಣಿಕರ ಮಾಹಿತಿ ಸಂಗ್ರಹಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2011, 19:30 IST
Last Updated 26 ಸೆಪ್ಟೆಂಬರ್ 2011, 19:30 IST

ಇಂಡಿ: ಭಯೋತ್ಪಾದಕರ ಬೆದರಿಕೆಯ ಹಿನ್ನೆಲೆಯಲ್ಲಿ ರಾಜ್ಯದ ವಿಮಾನ ನಿಲ್ದಾಣಗಳು, ಸಮುದ್ರ ತೀರದಲ್ಲಿ ಕಟ್ಟೆಚ್ಚರ ವಹಿಸಲು ಆದೇಶಿಸಲಾಗಿದೆ. ಜತೆಗೆ ಸೈಬರ್ ಅಪರಾಧ ತಡೆಗೆ ಪರಿಣಿತ ಎಂಜಿನಿಯರುಗಳ ಸೇವೆಯನ್ನೂ ಪಡೆಯಲಾಗುತ್ತಿದೆ ಎಂದು ಗೃಹ ಮತ್ತು ಸಾರಿಗೆ ಖಾತೆ ಸಚಿವ ಆರ್.ಅಶೋಕ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಮಾನ ಅಪಹರಿಸಿ ದುಷ್ಕೃತ್ಯವೆಸಗುವ ಭಯೋತ್ಪಾದಕರ ಕೃತ್ಯದ ಬಗ್ಗೆ ವಾರದ ಹಿಂದೆಯೇ ಮಾಹಿತಿ ಬಂದಿತ್ತು. ಹುಬ್ಬಳ್ಳಿ ವಿಮಾನ ನಿಲ್ದಾಣದ ಮೂಲಕ ಕಳೆದ ಮೂರು ತಿಂಗಳ ಅವಧಿಯಲ್ಲಿ ಪ್ರಯಾಣಿಸಿರುವ ಹಾಗೂ ಟಿಕೆಟ್ ಬುಕ್ ಮಾಡಿರುವ ಪ್ರಯಾಣಿಕರ ಮಾಹಿತಿಯನ್ನು ಪರಿಶೀಲಿಸಲು ಆದೇಶ ನೀಡಲಾಗಿದೆ ಎಂದು ಇಂಡಿಯಲ್ಲಿ ನಡೆದ ಸಮಾರಂಭದಲ್ಲಿ ತಿಳಿಸಿದರು.

ಮಂಗಳೂರು, ಕಾರವಾರ ಸೇರಿದಂತೆ 300 ಕಿ.ಮೀ ಉದ್ದದ ಸಮುದ್ರ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.