ADVERTISEMENT

ಹೆಚ್ಚಿದ ಫ್ಲೋರೈಡ್, ಕೆರೆಗಳು ಮಾಯ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2012, 19:30 IST
Last Updated 8 ಅಕ್ಟೋಬರ್ 2012, 19:30 IST

ತುಮಕೂರು: ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಗಂಭೀರವಾಗಿದ್ದು, 14 ಸಾವಿರ ಕೊಳವೆ ಬಾವಿಗಳ ನೀರಿನಲ್ಲಿ ಫ್ಲೋರೈಡ್ ಅಂಶ ಪತ್ತೆಯಾಗಿದೆ. ಮೂರು ಸಾವಿರಕ್ಕೂ ಹೆಚ್ಚು ಕೆರೆಗಳಲ್ಲಿ ನೂರಾರು ಕೆರೆಗಳು ಮಾಯವಾಗಿವೆ. ಬರದಿಂದಾಗಿ ಜಿಲ್ಲೆಯಲ್ಲಿ ಯಾವ ಕೆರೆಯೂ  ತುಂಬಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎ.ಗೋವಿಂದರಾಜು ಆತಂಕ ವ್ಯಕ್ತಪಡಿಸಿದರು.

ನಗರದಲ್ಲಿ  ನವದೆಹಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಬೆಂಗಳೂರು ಡಿಎಸ್‌ಆರ್‌ಟಿ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಆಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ ರಾಜ್ಯ ಮಟ್ಟದ `ಇನ್ಸ್‌ಸ್ಪೈರ್ ಅವಾರ್ಡ್~ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ, ವಿದ್ಯಾರ್ಥಿಗಳು ಗುರಿ ಮುಟ್ಟಲು ತಮ್ಮದೇ ಕ್ರಮಬದ್ಧ ಯೋಜನೆ ಹಾಕಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದರು.

ಆವಿಷ್ಕಾರದಲ್ಲಿ ತೊಡಗುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು ವಿಧಾನಪರಿಷತ್ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ ಹೇಳಿದರು.

ಡಿಎಸ್‌ಇಆರ್‌ಟಿ ನಿರ್ದೇಶಕ ಎಚ್. ಎಸ್.ರಾಮರಾವ್, ಜಿ.ಪಂ. ಅಧ್ಯಕ್ಷೆ ಪ್ರೇಮಾಮಹಾಲಿಂಗಪ್ಪ, ಉಪಾಧ್ಯಕ್ಷೆ ಮಮತಾ ಶಿವಲಿಂಗಯ್ಯ, ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಮೋಹನ್‌ಕುಮಾರ್, ಆನಂಜಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.