ADVERTISEMENT

‘ಹೆಚ್ಚುತ್ತಿದೆ ಮೈಸೂರು ವಿವಿ ಹೆಗ್ಗಳಿಕೆ’

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2018, 12:48 IST
Last Updated 28 ಏಪ್ರಿಲ್ 2018, 12:48 IST

ಮೈಸೂರು: ಮೈಸೂರು ವಿಶ್ವವಿದ್ಯಾ ನಿಲಯ ಪ್ರತಿಭೆಗಳನ್ನು ಬೆಳೆಸುವುದರ ಜತೆಗೆ ಹಲವು ವಿ.ವಿ.ಗಳಿಗೆ ಕುಲಪತಿಗಳನ್ನು ನೀಡುವುರ ಮೂಲಕ ತನ್ನ ಹೆಗ್ಗಳಿಕೆಯನ್ನು ದಿನದಿಂದ ದಿನಕ್ಕೆ ಹೆಚ್ಚಿಸಿಕೊಳ್ಳುತ್ತಿದೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.

ಈಚೆಗೆ ಮೈಸೂರು ವಿ.ವಿ. ಸಮಾಜಕಾರ್ಯ ಅಧ್ಯಯನ ವಿಭಾಗ ಇಲ್ಲಿ ಹಮ್ಮಿಕೊಂಡಿದ್ದ ತುಮಕೂರು ವಿ.ವಿ ನೂತನ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಪ್ರತಿಭೆ ಇರುವವರನ್ನು ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಮೈಸೂರು ವಿ.ವಿ.ಯಲ್ಲಿ ಹಲವು ಪ್ರತಿಭೆಗಳಿವೆ. ಆದ್ದರಿಂದ ಉನ್ನತ ಹುದ್ದೆಗಳಿಗೆ ನೇಮಕವಾಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ADVERTISEMENT

ಬಿ.ಆರ್.ಹಿಲ್ಸ್‌ ವಿಜಿಕೆಕೆ ಗೌರವ ಕಾರ್ಯದರ್ಶಿ ಡಾ.ಎಚ್.ಸುದರ್ಶನ್‌, ಕುಲಸಚಿವೆ ಡಿ.ಭಾರತಿ, ವಿಶ್ರಾಂತ ಕುಲಪತಿ ಪ್ರೊ.ಕೆ.ಚಿದಾನಂದಗೌಡ, ಸಾಹಿತಿ ಮಲ್ಲೇಪುರಂ ಜಿ.ವೆಂಕಟೇಶ್‌, ವಿಭಾಗದ ಪ್ರಾಧ್ಯಾಪಕರಾದ ಡಾ.ಎಚ್.ಪಿ.ಜ್ಯೋತಿ, ಚಂದ್ರಮೌಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.