ADVERTISEMENT

ಹೋಳಿ ಸಡಗರ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2011, 19:30 IST
Last Updated 20 ಮಾರ್ಚ್ 2011, 19:30 IST

ದೇವನಹಳ್ಳಿ: ಹೋಳಿ ಹುಣ್ಣಿಮೆ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭಾನುವಾರವು ಯುವಕ, ಯುವತಿಯರು ಪರಸ್ಪರ ಬಣ್ಣ ಎರಚಿ ಹೋಳಿ ಸಂಭ್ರಮ ಆಚರಿಸಿದರು.
ಭಾನುವಾರ ರಜಾದಿನವಾದ ಕಾರಣ ಬೆಳಿಗ್ಗೆಯಿಂದಲೇ ವರ್ತಕರು ಅಂಗಡಿಗಳನ್ನು ಮುಚ್ಚಿ ಹೋಳಿ ಆಚರಣೆಯಲ್ಲಿ ತೊಡಗಿಕೊಂಡರು.

ಬಿ.ಬಿ.ರಸ್ತೆ, ತಾಲ್ಲೂಕು ಕಚೇರಿ ರಸ್ತೆ, ಸರೋವರ ಬೀದಿ, ಬಸ್ ನಿಲ್ದಾಣ, ನಗರ್ತ ಬೀದಿ ಮತ್ತಿತರ ಪ್ರಮುಖ ಬೀದಿಗಳಲ್ಲಿ ಹೋಳಿ ಕಳೆಗಟ್ಟಿತ್ತು.  ಜೆಸಿಐ ಸಂಸ್ಥೆ, ನಗರ್ತ ಯುವಕ ಸಂಘ, ತ್ರಿಚಕ್ರ ವಾಹನ ಚಾಲಕರ ಸಂಘ, ಭುವನೇಶ್ವರಿ ಯುವಕ ಸಂಘ, ಕನ್ನಡ ಗೆಳೆಯರ ಬಳಗ ಮತ್ತಿತರ ಸಂಘ ಸಂಸ್ಥೆಗಳ ಸದಸ್ಯರು ಹೋಳಿಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.