ADVERTISEMENT

1.40 ಲಕ್ಷ ಗ್ರಾಹಕ ವ್ಯಾಜ್ಯ ಇತ್ಯರ್ಥ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2011, 19:30 IST
Last Updated 14 ಅಕ್ಟೋಬರ್ 2011, 19:30 IST

ಚಿತ್ರದುರ್ಗ: ರಾಜ್ಯದಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯಲ್ಲಿ 1.45 ಲಕ್ಷ ಪ್ರಕರಣಗಳು ದಾಖಲಾಗಿದ್ದು, 1.40 ಲಕ್ಷ ಪ್ರಕರಣಗಳು ಇತ್ಯರ್ಥವಾಗಿವೆ ಎಂದು ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಕೆ. ರಾಮಣ್ಣ ತಿಳಿಸಿದರು.

ನಗರದ ತುರುವನೂರು ರಸ್ತೆಯ ವೆಂಕಟೇಶ್ವರ ದೇವಸ್ಥಾನದ ಹತ್ತಿರ ನಿರ್ಮಿಸಿರುವ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅವರು ಶುಕ್ರವಾರ ಮಾತನಾಡಿದರು.

ಚಿತ್ರದುರ್ಗದ ವೇದಿಕೆಯಲ್ಲಿ 3,167 ಪ್ರಕರಣಗಳು ದಾಖಲಾಗಿದ್ದು, 3,120 ಪ್ರಕರಣಗಳು ಇತ್ಯರ್ಥವಾಗಿವೆ. ಜನಸಾಮಾನ್ಯರು ಕೇವಲ ಖರೀದಿಸುವ ವಸ್ತುಗಳಿಗೆ ಮಾತ್ರ ಗ್ರಾಹಕರಾಗಬಹುದು ಎಂದು ಭಾವಿಸಿದ್ದಾರೆ.
ವಕೀಲರು, ವೈದ್ಯರು, ಶಿಕ್ಷಣ ಸಂಸ್ಥೆಗಳು ಸಹ ಗ್ರಾಹಕರ ವ್ಯಾಜ್ಯಗಳ ಪರಿಮಿತಿಯಲ್ಲಿ ಬರುತ್ತಾರೆ ಎಂದರು.

ರೂ. 33 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ವೇದಿಕೆಯ ಕಟ್ಟಡಕ್ಕೆ ಕಾಂಪೌಂಡ್ ನಿರ್ಮಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.

ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶ ಶ್ರೀನಿವಾಸ್ ಹರೀಶ್ ಕುಮಾರ್, ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಆಹಾರ ಇಲಾಖೆ ಆಯುಕ್ತ ಗೋವಿಂದರಾಜ್, ಶಾಸಕ ಎಸ್.ಕೆ. ಬಸವರಾಜನ್, ವಕೀಲರ ಸಂಘದ ಅಧ್ಯಕ್ಷ ಬಿ.ಕೆ. ರಹಮತ್‌ವುಲ್ಲಾ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ವಿ.ಎಸ್. ರಾಮಚಂದ್ರ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಕೆ.ಜಿ. ಮೂಡಲಗಿರಿಯಪ್ಪ, ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ಟಿ. ನಂಜಪ್ಪ ಮತ್ತಿತರರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.