ADVERTISEMENT

3 ರಂದು ಸರ್ಕಾರಿ ಸವಲತ್ತು ಸಂತೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2012, 19:30 IST
Last Updated 22 ಫೆಬ್ರುವರಿ 2012, 19:30 IST

ಮೈಸೂರು: `ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಮಾರ್ಚ್ 3 ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಮೈಸೂರು ಜಿಲ್ಲೆ ಸರ್ಕಾರಿ ಸವಲತ್ತುಗಳ ಸಂತೆ ನಡೆಯಲಿದೆ~ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಬುಧವಾರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಈ ಸಂತೆಯಲ್ಲಿ 23 ಇಲಾಖೆಗಳಿಂದ  2011-12 ನೇ ಸಾಲಿನಲ್ಲಿ 64,785 ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುವುದು.
 
ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಚಾಲನೆ ನೀಡಲಿದ್ದಾರೆ. ಸರ್ಕಾರದ ಸವಲತ್ತುಗಳು ಫಲಾನುಭವಿಗಳಿಗೆ ನೇರವಾಗಿ ತಲುಪಿಸಬೇಕು ಎನ್ನುವ ಉದ್ದೇಶದಿಂದ ಇಂತಹ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ಸಂತೆಯಲ್ಲಿ ಪ್ರತಿ ಇಲಾಖೆಗೂ ಒಂದೊಂದು ಮಳಿಗೆಯನ್ನು ನೀಡಲಾಗುತ್ತಿದೆ ಎಂದರು.

ವಿಮುಕ್ತೆ ಯೋಜನೆ ಜಾರಿ: `ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ 45 ವರ್ಷ ತುಂಬಿರುವ ಅವಿವಾಹಿತ ಮಹಿಳೆಯರಿಗೆ ಮಾಸಾಶನ ನೀಡುವ ವಿಮುಕ್ತೆ ಯೋಜನೆಗೂ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 3010 ಮಹಿಳೆಯರನ್ನು ಗುರುತಿಸಲಾಗಿದ್ದು, ಇವವರು ಪ್ರತಿ ತಿಂಗಳು ಸಾವಿರ ರೂ.ಗಳನ್ನು ಪಡೆಯಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.