ಆನೇಕಲ್: 57 ನೇ ವನ್ಯಜೀವಿ ಸಪ್ತಾಹದ ಅಂಗ ವಾಗಿ ಅರಣ್ಯ ಇಲಾಖೆ ಆಯೋಜಿಸಿದ್ದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಟ್ಟಣದ ವಿಧಾತ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಹಾಗೂ ತೃತೀಯ ಬಹುಮಾನವನ್ನು ಗಳಿಸಿದ್ದಾರೆ.
ಬೆಂಗಳೂರಿನ ಅರಣ್ಯ ಭವನದಲ್ಲಿ ನಡೆದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಶಾಲೆಯ ಹತ್ತನೆಯ ತರಗತಿಯ ವಿದ್ಯಾರ್ಥಿಗಳಾದ ಸವೋತ್ತಮ ಭಾಗವತ್ ಪ್ರಥಮ ಹಾಗೂ ಯು.ವಿ.ಭಾರ್ಗವ ತೃತೀಯ ಬಹುಮಾನಗಳನ್ನು ಗಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕ ತಾ.ನಂ.ಕುಮಾರಸ್ವಾಮಿ, ಕಾರ್ಯದರ್ಶಿ ವಿಧಾತ್ ಹಾಗೂ ಮುಖ್ಯಶಿಕ್ಷಕ ವೆಂಕಟೇಶರೆಡ್ಡಿ ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.