ADVERTISEMENT

9ರಿಂದ ನಮ್ಮ ವೈದ್ಯ ನಿಮ್ಮ ಮನೆ ಬಾಗಿಲಿಗೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2012, 19:30 IST
Last Updated 20 ಜೂನ್ 2012, 19:30 IST

ಮೈಸೂರು: ಗ್ರಾಮೀಣ ಭಾಗದ ಜನರಿಗೆ ಮನೆ ಬಾಗಿಲಲ್ಲೇ ಚಿಕಿತ್ಸೆ ನೀಡುವ ಉದ್ದೇಶದಿಂದ ಜುಲೈ 9 ರಂದು `ನಮ್ಮ ವೈದ್ಯ ನಿಮ್ಮ ಮನೆ ಬಾಗಿಲಿಗೆ~ ಯೋಜನೆಯನ್ನು ಮೈಸೂರು ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗುವುದು~ ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಘೋಷಿಸಿದರು.

`ನಗರದ ಕೆ.ಆರ್.ಆಸ್ಪತ್ರೆಯ ಎಲ್ಲ ಘಟಕಗಳು ಹಾಗೂ ವಿಭಾಗಗಳ ವೈದ್ಯರು ತಮ್ಮ ತಂಡದೊಂದಿಗೆ ವಾರಕ್ಕೊಂದು ದಿನ ತಾಲ್ಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ನೀಡುವರು. ಇದಕ್ಕಾಗಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು ಹಾಗೂ ಎಎನ್‌ಎಂಗಳು (ಆಕ್ಸಿಲರಿ ನರ್ಸ್ ಮಿಡ್‌ವೈಫ್) ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ರೋಗಿಗಳ ಮಾಹಿತಿಯನ್ನು ಸಂಗ್ರಹಿಸಿ ತಾಲ್ಲೂಕು ವೈದ್ಯಾಧಿಕಾರಿಗೆ ನೀಡಲಿದ್ದಾರೆ~ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

`ಜುಲೈ 9ರಂದು ನಂಜನಗೂಡು ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಎಲ್ಲ ರೋಗಿಗಳಿಗೆ ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿ ಚಿಕಿತ್ಸೆ ನೀಡಲಾಗುವುದು. ಇದರಿಂದ ಜಿಲ್ಲಾಸ್ಪತ್ರೆಗೆ ಅನಗತ್ಯವಾಗಿ ರೋಗಿಗಳು ಅಲೆದಾಡುವುದು ತಪ್ಪಿದಂತಾಗುತ್ತದೆ~ ಎಂದು ಹೇಳಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.