ADVERTISEMENT

ಉಮಾಶ್ರೀ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 5:12 IST
Last Updated 21 ಏಪ್ರಿಲ್ 2018, 5:12 IST
ತೇರದಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಉಮಾಶ್ರೀ ಜಮಖಂಡಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದರು
ತೇರದಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಉಮಾಶ್ರೀ ಜಮಖಂಡಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದರು   

ರಬಕವಿ ಬನಹಟ್ಟಿ: ಸಚಿವೆ ಉಮಾಶ್ರೀ ತೇರದಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಶುಕ್ರವಾರ ಮಧ್ಯಾಹ್ನ 1.15ರ ಸುಮಾರಿಗೆ ಜಮಖಂಡಿಯಲ್ಲಿ ತೇರದಾಳ ವಿಧಾನಸಭಾ ಚುನಾವಣಾಧಿಕಾರಿಗೆ ನಾಮಪತ್ರವನ್ನು ಸಲ್ಲಿಸಿದರು.

ಸಚಿವೆ ಉಮಾಶ್ರೀ ಅವರು ₹ 1.83 ಕೋಟಿ ಮೌಲ್ಯದ ಚರಾಸ್ತಿಯನ್ನು ಮತ್ತು ₹ 3.99 ಕೋಟಿ ಮೊತ್ತದ ಸ್ಥಿರಾಸ್ತಿಯನ್ನು ಹೊಂದಿದ್ದಾರೆ. ಇವರು ₹ 6.42 ಲಕ್ಷ ಮೊತ್ತದ ಸಾಲವನ್ನು ಹೊಂದಿದ್ದಾರೆ. ಅವಲಂಬಿತರ ಹೆಸರಿನಲ್ಲಿ ಯಾವುದೇ ಸ್ಥಿರಾಸ್ತಿ ಮತ್ತು ಚರಾಸ್ತಿಗಳನ್ನು ಹೊಂದಿರುವುದಿಲ್ಲ ಎಂದು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಉತ್ತಮ ಆಡಳಿತವನ್ನು ನೀಡಿದೆ. ಅದೇ ರೀತಿಯಾಗಿ ಸಚಿವೆ ಉಮಾಶ್ರೀ ಐದು ವರ್ಷಗಳಲ್ಲಿ ಕ್ಷೇತ್ರದಲ್ಲಿ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಸಾಕಷ್ಟು ಉತ್ತಮ ಕಾರ್ಯಕ್ರಮಗಳನ್ನು ಮಾಡಿ ದ್ದಾರೆ. ಈ ಬಾರಿ ಮತ್ತೆ ಉಮಾಶ್ರೀ ತೇರದಾಳ ವಿಧಾನ ಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ವಿಜಯಶಾಲಿಗಳಾಗುತ್ತಾರೆ’ ಎಂದು ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ತಿಳಿಸಿದರು. ಪ್ರವೀಣ ನಾಡಗೌಡ, ರಂಗನಗೌಡ ಪಾಟೀಲ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.