ADVERTISEMENT

ಎಂಆರ್‌ಎಚ್‌ಎಸ್‌ನಿಂದ ಅರೆಬೆತ್ತಲೆ ಪ್ರತಿಭಟನೆ

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅಂಗೀಕಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2013, 9:07 IST
Last Updated 5 ಡಿಸೆಂಬರ್ 2013, 9:07 IST
ಬಾಗಲಕೋಟೆ ನವನಗರದ ಜಿಲ್ಲಾಡಳಿತ ಭವನದ ಮುಂಭಾಗ ಬುಧವಾರ ಮಾದಿಗ ಮೀಸಲಾತಿ ಹೋರಾಟ ಸಮಿತಿ(ಸಂಸ್ಥಾಪಕ) ಪದಾಧಿಕಾರಿಗಳು, ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅಂಗೀಕಾರಕ್ಕೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ಬಾಗಲಕೋಟೆ ನವನಗರದ ಜಿಲ್ಲಾಡಳಿತ ಭವನದ ಮುಂಭಾಗ ಬುಧವಾರ ಮಾದಿಗ ಮೀಸಲಾತಿ ಹೋರಾಟ ಸಮಿತಿ(ಸಂಸ್ಥಾಪಕ) ಪದಾಧಿಕಾರಿಗಳು, ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅಂಗೀಕಾರಕ್ಕೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.   

ಬಾಗಲಕೋಟೆ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅಂಗೀಕಾರಕ್ಕೆ ಆಗ್ರಹಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ(ಸಂಸ್ಥಾಪಕ) ಪದಾಧಿಕಾರಿಗಳು ಬುಧವಾರ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ನವನಗರದ ಡಾ. ಬಾಬು ಜಗಜೀವನರಾಂ ಸಮುದಾಯ ಭವನದಿಂದ ಜಿಲ್ಲಾಡಳಿತದ ಭವನದ ವರೆಗೆ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಎಂಆರ್‌ಎಚ್‌ಎಸ್‌ ಪದಾಧಿಕಾರಿಗಳು, ಬೇಡಿಕೆಯ ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ರಾಜ್ಯ ಸರ್ಕಾರವು ಚಳಿಗಾಲದ ಅಧಿವೇಶನದಲ್ಲಿ ವರದಿಯನ್ನು ಅಂಗೀಕರಿಸಿ ಜಾರಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದಿದ್ದರೇ ಮುಂಬರುವ ಲೋಕಸಭಾ ಚುನಾವಣೆ­ಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮಾಜದವರು ಮತ ಚಲಾಯಿಸ-­ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಅಸ್ಪೃಶ್ಯರಾದ ಮಾದಿಗ, ಹೊಲೆಯ, ಚಮ್ಮಾರ, ಸಮಗಾರ, ಡೋಹರರಿಗೆ ಒಳ ಮೀಸಲಾತಿ ಜಾರಿಗೊಳಿಸುವ ಮೂಲಕ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಉನ್ನತಿಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರದಲ್ಲಿ ಮಾದಿಗರಿಗೆ ಇನ್ನೊಂದು ಸಚಿವ ಸ್ಥಾನ ನೀಡಬೇಕು, ನಿಗಮ ಮಂಡಳಿಗಳಲ್ಲಿ ಮಾದಿಗರಿಗೆ ಆದ್ಯತೆ ನೀಡಬೇಕು, ಮಾದಿಗ ಮುಖಂಡರೊಬ್ಬರನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಎಂಆರ್‌ಎಚ್ಎಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪರಶುರಾಮ ಮರೇಗುದ್ದಿ, ಜಿಲ್ಲಾ ಘಟಕದ ಅಧ್ಯಕ್ಷ ಸೋಮು ಚೂರಿ, ಮುಖಂಡರಾದ ವೈ.ವೈ.ತಿಮ್ಮಾಪುರ, ಆನಂದ ಬಾಬು ಪೂಜಾರಿ, ಬಸವರಾಜ ನಾಗೂರ, ಮಾರುತಿ ಜಮೀನದಾರ, ಮಹೇಶ ಹುಗ್ಗಿ, ರಾಕೇಶ ಮಾದರ, ಆನಂದ ಕಲಗಲಿ, ಸರಾಜ ದೊಡಮನಿ, ಸಿದ್ದು ಸತ್ಯನ್ನವರ, ಸಂತೋಷ ನಾಟಿಕಾರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.