ADVERTISEMENT

ಕಾಂಗ್ರೆಸ್ ಪೂರ್ವಭಾವಿ ಸಭೆಯಲ್ಲಿ ಗೊಂದಲ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2013, 6:38 IST
Last Updated 5 ಆಗಸ್ಟ್ 2013, 6:38 IST

ಮುಧೋಳ: `ದೇಶದಲ್ಲಿ ಏಕತೆಗಾಗಿ, ಬಡವರ ಕಲ್ಯಾಣಕ್ಕಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಬರಬೇಕೆಂದು ದೇಶದ ಜನತೆ ಬಯಸುತ್ತಿದ್ದಾರೆ. ಪ್ರಜ್ಞಾವಂತ ಮತದಾರರು ಬಿಜೆಪಿ ಯನ್ನು ಧಿಕ್ಕರಿಸಿ ಕಾಂಗ್ರೆಸ್ ಬೆಂಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ' ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವೀಕ್ಷಕ ಸುದರ್ಶನ ಹೇಳಿದರು.

ಅವರು ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಲೋಕ ಸಭಾ ಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಲೋಕ ಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತು ಜಿಲ್ಲೆಯ ಎಲ್ಲ ಬ್ಲಾಕ್ ಹಾಗೂ ಜಿಲ್ಲಾ ಸಮಿತಿಯ ವರದಿಯನ್ನು ಪಕ್ಷದ ವರಿಷ್ಠರಿಗೆ ಸಲ್ಲಿಸುವುದಾಗಿ ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಮಾತನಾಡಿ ಪಕ್ಷದ ಮುಖಂಡರು ಕಾರ್ಯಕರ್ತರು ಸಂಘಟಿತರಾಗಿ ಕಾರ್ಯಮಾಡಿ ಪಕ್ಷ ಯಾರನ್ನೇ ನಿಲ್ಲಿಸಿದರು ಆಯ್ಕೆ ಮಾಡುವ ಸಂಕಲ್ಪ ಮಾಡುವುದರ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ರಚನೆಯಾಗಬೇಕು ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಹಾಗೂ ವಿಧಾನ ಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹೇಶ ಬಿಳ್ಳೂರ, ರಾಜು ಬಾಗವಾನ, ಜಗನ್ನಾಥ ಪವಾರ ಮತ್ತಿತರರು ಆಗ್ರಹಿಸಿದ ವೇಳೆ ಕೆಲಕಾಲ ಗೊಂದಲ ಉಂಟಾಯಿತು. ತಿಮ್ಮಾಪುರ ಕಾರ್ಯಕರ್ತರನ್ನು ಸಮಾಧಾನ ಪಡಿಸಿದರು.

ಲೋಕಸಭೆ ಚುನಾವಣೆಗೆ ಸ್ಪರ್ಧೆ ಬಯಸಿ ಬಾಗಲಕೋಟೆ ಜಿ. ಪಂ. ಮಾಜಿ ಅಧ್ಯಕ್ಷ ಶಿವಕುಮಾರ ಮಲಘಾಣ, ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ದಯಾನಂದ ಪಾಟೀಲ, ಜಿ.ಸಿ. ಚಿನಿವಾಲ, ಶ್ರೀಶೈಲ ದಳವಾಯಿ, ಡಾ.ದೇವರಾಜ ಪಾಟೀಲ ಹಾಗೂ ಶಂಕರ ಬಿದರಿ ಮನವಿ ಸಲ್ಲಿಸಿದರು.

ಎಚ್.ಎ.ಕಡಪಟ್ಟಿ, ಲೋಕಣ್ಣ ಕೊಪ್ಪದ, ಶಿವಾನಂದ ಕತ್ತಿ, ಮಹಾದೇವ ಹೊಸಟ್ಟಿ, ಹಣಮಂತ ಅಡವಿ, ರಾಜು ಬಾಗವಾನ, ವೆಂಕಣ್ಣ ಸೊನ್ನದ, ಗೋವಿಂದಪ್ಪ ಗುಜ್ಜಣ್ಣವರ ಹಾಗೂ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.