ADVERTISEMENT

ಖಜ್ಜಿಡೋಣಿ ರೈಲು ನಿಲ್ದಾಣ ಕಾಮಗಾರಿ ಕಳಪೆ: ಆರೋಪ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2017, 4:52 IST
Last Updated 23 ಅಕ್ಟೋಬರ್ 2017, 4:52 IST

ಕಲಾದಗಿ: ಸಮೀಪದ ಖಜ್ಜಿಡೋಣಿ ರೈಲು ನಿಲ್ದಾಣ ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಡಿ.ಡಿ.ದುರ್ವೆ ಅವರು ಆರೋಪಿಸಿದ್ದಾರೆ

ಸುದ್ದಿಗಾರರ ಜೊತೆ ಮಾತನಾಡಿದ ಅವರು, ರೈಲು ನಿಲ್ದಾಣದಲ್ಲಿ ಈಗಾಗಲೇ ಬಿರುಕು ಬಿಟ್ಟಿದ್ದು, ಮೆಟ್ಟಿಲು ಸಂಪೂರ್ಣ ಹಾಳಾಗಿವೆ. ಸಾರ್ವಜನಿಕರ ಅನೂಕೂಲಕ್ಕಾಗಿ ಕೊಟ್ಯಾಂತರ ರೂಪಾಯಿ ಖರ್ಚು ಮಾಡಿ ನಿಲ್ದಾಣ ನಿರ್ಮಿಸಲಾಗಿದೆ. ಆದರೆ ಕಾಮಗಾರಿ ಮಾತ್ರ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ದೂರಿದ್ದಾರೆ.

‘ಬಾಗಲಕೋಟೆಯಿಂದ ಖಜ್ಜಿಡೋಣಿ ವರೆಗಿನ 33 ಕಿ.ಮೀ ಕಾಮಗಾರಿ ಮುಗಿಸಲು ₹ 3.75 ಕೋಟಿ ಖರ್ಚು ಮಾಡಲಾಗಿದೆ. ಪ್ರಾಯೋಗಿಕವಾಗಿ ರೈಲು ಓಡಿಸುವ ಮೂಲಕ ಇಲಾಖೆ ಕೈ ತೊಳೆದುಕೊಂಡಿದೆ. ಕೆಲ ನಿಲ್ದಾಣಗಳು ಅನೈತಿಕ ಚಟುವಟಿಕೆಯ ತಾಣಗಳಾಗಿವೆ’ ಎಂದು ರೈಲ್ವೆ ಸಮಿತಿಯ ಅಧ್ಯಕ್ಷ ಕುತುಬುದ್ದೀನ್ ಖಾಜಿ ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.