ADVERTISEMENT

ಜೆಡಿಎಸ್‌ ಅಭ್ಯರ್ಥಿ ನಾನೇ: ತೌಫೀಕ ಪಾರ್ಥನಳ್ಳಿ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2018, 5:12 IST
Last Updated 2 ಏಪ್ರಿಲ್ 2018, 5:12 IST

ಜಮಖಂಡಿ: ‘ಜಮಖಂಡಿ ವಿಧಾನಸಭಾ ಮತಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಯಾರಿಗೆ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಸುಳ್ಳು ಸುದ್ದಿ ಹರಡಿಸಲಾಗುತ್ತಿದೆ. ಆದರೆ, ಜಮಖಂಡಿ ಮತಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ನಾನೇ’ ಎಂದು ತೌಫೀಕ ಪಾರ್ಥನಳ್ಳಿ ಸುದ್ದಿಗೋಷ್ಠಿಯಲ್ಲಿ ಹೇಳಿದರು. ‘ಜೆಡಿಎಸ್‌ ಪಕ್ಷದಲ್ಲಿ ಸಾಕಷ್ಟು ಮಂದಿ ಟಿಕೆಟ್‌ ಆಕಾಂಕ್ಷಿಗಳು ಇದ್ದಾರೆ. ಆದರೆ, ಜೆಡಿಎಸ್‌ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿಯೇ ತಮ್ಮ ಹೆಸರು ಘೋಷಣೆ ಆಗಿರುವುದರಿಂದ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದ್ದೇನೆ’ ಎಂದರು.

‘ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಆಗಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಆಗಬೇಕು ಎಂದು ಸಾಮೂಹಿಕವಾಗಿ ರೈತರು ಜೆಡಿಎಸ್‌ಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಈ ಬೆಳವಣಿಗೆ ಸಹಿಸದ ಕೆಲವರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಅದಕ್ಕೆ ಯಾರೂ ಕಿವಿಗೊಡಬಾರದು’  ಎಂದರು.‘ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಸಂಘಟನೆಯಲ್ಲಿ ತೊಡಗಿರುವೆ. ಯಾವುದೇ ಗೊಂದಲಕ್ಕೆ ಆಸ್ಪದ ನೀಡುವುದಿಲ್ಲ. ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಮಾಡಿದ್ದ ಅಭಿವೃದ್ಧಿ ಕೆಲಸಗಳು ತಮಗೆ ಶ್ರೀರಕ್ಷೆ ಆಗಲಿದೆ. ತಮ್ಮ ಗೆಲುವು ನಿಶ್ಚಿತ’ ಎಂದರು.

ವಕೀಲ ಸಿ.ಆರ್. ಸುತಾರ ಮಾತನಾಡಿದರು. ಯಾಕೂಬ ನದಾಫ, ಜಿ.ಎಂ. ಶೇಖ, ಜ್ಯೋತಿಬಾ ಚವಾಣ, ನಿಸಾರ ಜೈನಾಪುರ, ಯಾಸೀನ ಲೋಧಿ, ಆಯೂಬ ಗದಗ, ಗೂಳಪ್ಪ ನ್ಯಾಮಗೌಡ, ಕಾಡಪ್ಪ ಹೊಸಮನಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.