ADVERTISEMENT

ಮದ್ಯದಂಗಡಿ ಮುಚ್ಚುವ ಭರವಸೆ: ಉಪವಾಸ ಕೈಬಿಟ್ಟ ಗ್ರಾಮಸ್ಥರು

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2017, 4:47 IST
Last Updated 26 ಅಕ್ಟೋಬರ್ 2017, 4:47 IST

ಸಾವಳಗಿ: ಸಮೀಪದ ತೊದಲಬಾಗಿ ಗ್ರಾಮದಲ್ಲಿ ಮದ್ಯದಂಗಡಿಗಳನ್ನು ಮುಚ್ಚುವುದಾಗಿ ಅಬಕಾರಿ ಇಲಾಖೆಯ ಉಪ ಆಯುಕ್ತರು ಭರವಸೆ ನೀಡಿದ್ದರಿಂದ, ಗ್ರಾಮದ ಐವರು ಬುಧವಾರ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದರು.

ಹತ್ತು ದಿನಗಳಿಂದ ಗ್ರಾಮಸ್ಥರು ಹಾಗೂ ವಿವಿಧ ಮಹಿಳಾ ಸಂಘಟನೆಯವರು ಸತ್ಯಾಗ್ರಹ ನಡೆಸಿಕೊಂಡು ಬಂದಿದ್ದರು.

ಮದ್ಯದಂಗಡಿಗಳನ್ನು ಮುಚ್ಚಬೇಕು. ಇಲ್ಲವೇ, ಗ್ರಾಮಸ್ಥರಿಗೆ ವಿಷ ನೀಡಿ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದ್ದಿದ್ದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಅಬಕಾರಿ ಇಲಾಖೆಯ ಉಪ ಆಯುಕ್ತ ಬಸವರಾಜ ಸಂದಿಗವಾಡ, ಮದ್ಯದಂಗಡಿಗಳನ್ನು ಮುಚ್ಚವ ಭರವಸೆ ನೀಡಿದರು.

ADVERTISEMENT

ಈ ವೇಳೆ ತಹಶೀಲ್ದಾರ್ ಪ್ರಶಾಂತ ಚನ್ನಗೊಂಡ, ತಾಲೂಕ ಪಂಚಾಯ್ತಿಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ವೈ. ಬಸರಿಗಿಡದ, ತಾಲೂಕ ಪಂಚಾಯ್ತಿ ಸದಸ್ಯ ಶ್ರೀಮಂತ ಚೌರಿ ಹಾಗೂ ಅಬಕಾರಿ ನಿರೀಕ್ಷಕ ಸಂಗಮೇಶ ಮೂರನಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.