ADVERTISEMENT

ಮನೆ ಕುಸಿತ: ಅಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2017, 5:09 IST
Last Updated 14 ಅಕ್ಟೋಬರ್ 2017, 5:09 IST

ಹುನಗುಂದ: ತಾಲೂಕಿನಲ್ಲಿ ಕಳೆದ 15 ದಿನಗಳಿಂದ ಬಿಟ್ಟುಬಿಡದೆ ಸುರಿದ ಮಳೆಯಿಂದಾಗಿ ಕೆಲವು ಕಡೆ ಜಮೀನು ಒಡ್ಡುಗಳು ಒಡೆದು ಹೋಗಿವೆ. ಅಲ್ಲದೇ ಕೆಲವು ಕಡೆ ಮನೆ ಕುಸಿದು ಹಾನಿ ಸಂಭವಿಸಿದೆ.

ನಗರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ವಾಣಿಪೇಟೆಯ(ಕುಂಬಾರ ಓಣಿ) ತಗ್ಗು ಪ್ರದೇಶದ ಕೆಲ ಮನೆಗಳಿಗೆ ಚರಂಡಿಯ ನೀರು ನುಗ್ಗಿ ತೊಂದರೆ ಉಂಟಾಗಿದೆ. ಮಳೆಯಿಂದಾಗಿ ನೆನೆದಿದ್ದ ಸಂಗಪ್ಪ ಹಲ್ಪಿಯವರ ಮನೆಯ ಚಾವಣಿ ಕುಸಿದು ಬಿದ್ದಿದೆ.

ಸ್ಥಳಕ್ಕೆ ಕಂದಾಯ ನಿರೀಕ್ಷಕ ಎಸ್.ಎಂ. ಬಾಲಗಾವಿ ಮತ್ತು ಗ್ರಾಮ ಲೆಕ್ಕಾಧಿಕಾರಿ ಸುರೇಶ ಹಗ್ಗದ ಭೇಟಿ ನೀಡಿ ಪರಿಶೀಲಿಸಿದರು. ಹಾನಿಯ ಪರಿಹಾರಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.