ಬಾಗಲಕೋಟೆ: ಕೃಷಿಕರ ವಿಶ್ವವಿದ್ಯಾಲಯ ಎಂದೇ ಖ್ಯಾತಿ ಪಡೆದಿರುವ ತಾಲ್ಲೂಕಿನ ಮುರನಾಳದ ಮಳೇರಾಜೇಂದ್ರ ಸ್ವಾಮಿಮಠದ ಜಾತ್ರಾ ಮಹೋತ್ಸವ ನಿಮಿತ್ತ ಶುಕ್ರವಾರ ರಥೋತ್ಸವ ಅದ್ದೂರಿಯಾಗಿ ನಡೆಯಿತು.
ಮಳೇರಾಜೇಂದ್ರ ಸ್ವಾಮಿ ಮಠದ ಜಾತ್ರಾ ಮಹೋತ್ಸವ ನಿಮಿತ್ತ ಮಹಾರಥೋತ್ಸವದ ನಿಮಿತ್ತ ಮಳೇರಾಜೇಂದ್ರ ಸ್ವಾಮಿ ಮಠದಲ್ಲಿ ಬೆಳೆಗ್ಗೆ ವಿಶೇಷ ಪೂಜೆ, ಅಭಿಷೇಕ ಕಾರ್ಯಕ್ರಮಗಳು ನಡೆದವು. ಅಲ್ಲದೇ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿತ್ತು.
ಸಂಜೆ ಸುಮಂಗಲೆಯರ ಆರುತಿ , ಸಕಲ ವಾಧ್ಯವೈಭವ ಹಾಗೂ ಸಹಸ್ರಾರು ಜನರ ಮಧ್ಯೆದಲ್ಲಿ ಮಳೇರಾಜೇಂದ್ರ ಸ್ವಾಮಿಮಠದ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ರಥೋತ್ಸವ ಸಾಗುತ್ತಿದ್ದಂತೆ ಭಕ್ತರು ಉತ್ತತ್ತಿ, ಚುರುಮುರಿ, ಬಾಳೆಹಣ್ಣುಗಳನ್ನು ತೇರಿನ ಮೇಲೆ ಹಾರಿಸುವ ಮೂಲಕ ಭಕ್ತಿಯನ್ನು ಸಮರ್ಪಿಸಿದರು.
ತೇರವನ್ನು ಬಣ್ಣದ ಹೊಸ ಬಟ್ಟೆ, ಹೂಮಾಲೆ ಹಾಗೂ ಪರಪರಿಯಿಂದ ಅಲಂಕರಿಸಲಾಗಿತ್ತು. ಬಾಗಲಕೋಟೆ ಜಿಲ್ಲೆ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
ಇಂದು ಕಡುಬಿನ ಕಾಳಗ
ಶನಿವಾರ ಸಂಜೆ ಕಡುಬಿನ ಕಾಳಗ ಕಾರ್ಯಕ್ರಮ ನಡೆಯಲಿದೆ. ಮುಂದಿನ ವರ್ಷದ ಮಳೆ ಬೆಳೆ ಸೂಚನೆ ನೀಡುವ ಕಡುಬಿನ ಕಾಳಗ ವಿಶೇಷ ಕಾರ್ಯಕ್ರಮ ನಡೆಯಲಿದ್ದು, ನೂರಾರು ಜನರು ಪಾಲ್ಗೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.