ADVERTISEMENT

ಸಕಾರಾತ್ಮಕ ಆಲೋಚನೆ ಬೆಳೆಸಿಕೊಳ್ಳಲು ಮಕ್ಕಳಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2013, 6:41 IST
Last Updated 5 ಆಗಸ್ಟ್ 2013, 6:41 IST

ಕೂಡಲಸಂಗಮ: `ಶಿಕ್ಷಕರು ಮಕ್ಕಳಿಗೆ ನಕಾರಾತ್ಮಕ ವಿಚಾರಗಳನ್ನು ತೊಡೆದುಹಾಕಿ ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಬೇಕು' ಎಂದು ರಾಮಕೃಷ್ಣ ಮಠದ ಸ್ವಾಮಿ ತ್ಯಾಗೇಶ್ವರಾನಂದ ಸ್ವಾಮೀಜಿ ಹೇಳಿದರು.

ಕೂಡಲಸಂಗಮದ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ನಡೆದ ವಿವೇಕಾನಂದರ ರಥಯಾತ್ರೆ ಸ್ವಾಗತ ಸಮಾರಂಭದ ಸಾನಿಧ್ಯವಹಿಸಿ ಅವರು ಮಾತನಾಡಿದರು. ಸ್ವಾಮೀ ವಿವೇಕಾನಂದರ ತತ್ವ ವಿಚಾರಗಳು ಇಂದಿನ ಯುವ ಜನಾಂಗಕ್ಕೆ ಅಗತ್ಯ. ಯುವ ಜನಾಂಗದಲ್ಲಿ ಜಾಗೃತಿ ಉಂಟು ಮಾಡುವ ಉದ್ದೇಶದಿಂದ ಈ ಯಾತ್ರೆ ಮಾಡುತ್ತಿದ್ದು ಈ ಯಾತ್ರೆಯ ಮೂಲಕ ಇಂದಿನ ಯುವ ಜನಾಂಗದಲ್ಲಿ ಬದಲಾವಣೆ ತರಲಾಗುವುದು ಎಂದು ಹೇಳಿದರು.

   ಸಮಾರಂಭದಲ್ಲಿ ಸಂಗಮೇಶ್ವರ ಪದವಿ ಪೂರ್ವ ಕಾಲೇಜ ಪ್ರಭಾರ ಪ್ರಾಚಾರ್ಯ ಬಿ.ಐ. ಬಡಿಗೇರ, ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಸೋಮಶೇಖರ, ಭಾರತೀಯ ಸ್ಟೇಟ್ ಬ್ಯಾಂಕಿನ ಮನೋಹರ ಮುಂತಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.