ADVERTISEMENT

ಕೋವಿಡ್: ಹೊಸದಾಗಿ 115 ಪ್ರಕರಣ ದೃಢ, 81 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2020, 15:01 IST
Last Updated 21 ಆಗಸ್ಟ್ 2020, 15:01 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ ನಿಂದ ಮತ್ತೆ 81 ಜನ ಗುಣಮುಖರಾಗಿ ಶುಕ್ರವಾರ ಮನೆಗೆ ತೆರಳಿದ್ದಾರೆ.

ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆ 4029 ಕ್ಕೆ ಏರಿಕೆಯಾಗಿದೆ ‌ ಇಂದು ಹೊಸದಾಗಿ 115 ಪ್ರಕರಣ ದೃಢಪಟ್ಟಿವೆ. ಇಲ್ಲಿಯವರೆಗೆ ಕೋವಿಡ್ ದೃಢಪಟ್ಟವರ ಸಂಖ್ಯೆ 4922ಕ್ಕೆ ಏರಿಕೆಯಾಗಿದೆ.

ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 14, ಬಾದಾಮಿ 23, ಹುನಗುಂದ 14, ಬೀಳಗಿ 17, ಮುಧೋಳ 27, ಜಮಖಂಡಿ 17, ಹೊರ‌ ಜಿಲ್ಲೆಯ ಮೂವರಿಗೆ ಕೊರೊನಾ ದೃಢಪಟ್ಟಿದೆ.

ADVERTISEMENT

ಸಕ್ರಿಯ ಪ್ರಕರಣ ಒಟ್ಟು 836 ಇವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲಾ ಕೋವಿಡ್ ಲ್ಯಾಬ್ ನಲ್ಲಿ ಪರೀಕ್ಷಿಸಲಾಗುತ್ತಿದ್ದ 937 ಸ್ಯಾಂಪಲ್‍ಗಳ ವರದಿ ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸದ್ಯ ಪ್ರತ್ಯೇಕವಾಗಿ ನಿಗಾದಲ್ಲಿ ಇರುವವರು 551 ಇಲ್ಲಿಯವರೆಗೆ ಕಳುಹಿಸಲಾದ ಒಟ್ಟು ಸ್ಯಾಂಪಲ್ 48,462.ಒಟ್ಟು ನೆಗಟಿವ್ ಪ್ರಕರಣ 42,298, ಮೃತಪಟ್ಟವರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.