ರಬಕವಿ ಬನಹಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆ ಆಗುತ್ತಿದ್ದು, ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡಲಾಗುತ್ತಿದೆ.
ಬುಧವಾರ ಸಂಜೆ ಕೃಷ್ಣಾ ನದಿಗೆ 1.32 ಲಕ್ಷ ಕ್ಯೂಸೆಕ್ ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.
ಹಿಪ್ಪರಗಿ ಬ್ಯಾರೇಜ್‌ನಲ್ಲಿ ನೀರಿನ ಮಟ್ಟ 523.04 ಮೀಟರ್ ದಾಖಲಾಗಿದೆ ಎಂದು ಬ್ಯಾರೇಜ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.