ರಬಕವಿ ಬನಹಟ್ಟಿ: ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಸಮೀಪದ ಹಿಪ್ಪರಗಿ ಬ್ಯಾರೇಜ್‌ಗೆ ಬುಧವಾರ ಬೆಳಿಗ್ಗೆ 7 ಗಂಟೆಗೆ 1.51 ಲಕ್ಷ ಕ್ಯುಸೆಕ್ ಒಳ ಹರಿವು ಇದ್ದು, 1,50,345 ಲಕ್ಷ ಕ್ಯುಸೆಕ್ ಹೊರ ಹರಿವು ದಾಖಲಾಗಿದೆ.
ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಬನಹಟ್ಟಿ ಸಮೀಪದಲ್ಲಿ ಕೃಷ್ಣಾ ನದಿ ಭೋರ್ಗರೆಯುತ್ತಿದೆ.
ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಾದ ಕೊಯ್ನಾ: 16.2 ಸೆಂ.ಮೀ, ನವುಜಾ: 15.7 ಸೆಂ.ಮೀ, ಮಹಾಬಳೇಶ್ವರ: 15.7 ಸೆಂ.ಮೀ, ಕನ್ಹೇರಿ: 3.5 ಸೆಂ.ಮೀ, ತರಾಳಿ: 18.3 ಸೆಂ.ಮೀ, ವಾರಣಾ: 16.8 ಸೆಂ.ಮೀ, ರಾಧಾನಗರಿ: 12 ಸೆಂ.ಮೀ, ದೂಧಗಂಗಾ 8 ಸೆಂ.ಮೀ ಮಳೆಯಾದ ವರದಿಯಾಗಿದೆ.
ನೀರಿನ ಒಳ ಹರಿವು ಹೆಚ್ಚಾಗಿರುವುದರಿಂದ ಯಾವುದೇ ರೀತಿಯಲ್ಲಿ ನೀರನ್ನು ತಡೆ ಹಿಡಿದಿಲ್ಲ. ನಿರಂತರವಾಗಿ ನೀರನ್ನು ಹರಿದು ಬಿಡಲಾಗುತ್ತಿದೆ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬಿಡಕರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.