
ವೈದ್ಯ (ಸಾಂದರ್ಭಿಕ ಚಿತ್ರ)
ಬಾಗಲಕೋಟೆ : ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಹಾಗೂ ಶಾಸಕರಾಗಿದ್ದ ಎಚ್.ವೈ. ಮೇಟಿ ಅವರ ಕನಸು ನನಸಾಗಿಸಲು ಎಲ್ಲ ಪ್ರಯತ್ನ ನಡೆದಿದ್ದು, ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಸ್ಥಾಪನೆಗೆ 42 ಎಕರೆ ಭೂಮಿ ಹಸ್ತಾಂತರಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಹೊಳಬಸು ಶೆಟ್ಟರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಲೀಜ್ ಆಧಾರದ ಮೇಲೆ ನೀಡಿದ್ದನ್ನು ರದ್ದುಪಡಿಸಿ, ವೈದ್ಯಕೀಯ ಕಾಲೇಜು ಸ್ಥಾಪನೆಗೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಸೆಕ್ಟರ್ ನಂ.1 ಮತ್ತು 13ರ ಭೂಮಿಯನ್ನು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಗೆ ಉಚಿತವಾಗಿ ಹಸ್ತಾಂತರಿಸಲು ಜಲ ಸಂಪನ್ಮೂಲ ಇಲಾಖೆಯ ಅಧೀನ ಕಾರ್ಯದರ್ಶಿ ವಿಜಯಲಕ್ಷ್ಮಿ ಸೋಮವಾರ ಆದೇಶ ಹೊರಡಿಸಿದ್ದಾರೆ ಎಂದು ಶೆಟ್ಟರ ತಿಳಿಸಿದ್ದಾರೆ.
ಈಗಾಗಲೇ ಕಾಲೇಜು ಸ್ಥಾಪನೆಗೆ ಸರ್ಕಾರ ₹550 ಕೋಟಿಗೆ ಅನುಮೋದನೆ ಕೂಡ ನೀಡಿದೆ. ಶೀಘ್ರವೇ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ಮಾಡಲಾಗುವುದು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.