ADVERTISEMENT

ಕೇಂದ್ರ ಸಚಿವ ಹೆಗಡೆ ವಜಾಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಜನವರಿ 2018, 7:07 IST
Last Updated 2 ಜನವರಿ 2018, 7:07 IST

ಜಮಖಂಡಿ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಖಂಡಿಸಿ ಹಾಗೂ ವಿಜಯಪುರದ ದಲಿತ ಬಾಲಕಿಯ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಸಾವಳಗಿ ಬ್ಲಾಕ್‌ ಕಾಂಗ್ರೆಸ್‌ ಹಾಗೂ ಜಮಖಂಡಿ ಬ್ಲಾಕ್‌ ಕಾಂಗ್ರೆಸ್‌ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟಿಸಿದರು.

ಇಲ್ಲಿನ ಎ.ಜಿ. ದೇಸಾಯಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆತಡೆ ನಡೆಸಿ, ಹೆಗಡೆ ಅವರ ಪೃತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೊನೆಯಲ್ಲಿ ಎಸಿ ಕಚೇರಿ ಆವರಣದಲ್ಲಿ ಬಹಿರಂಗ ಸಭೆ ನಡೆಸಿದರು.

ಶಾಸಕ ಸಿದ್ದು ನ್ಯಾಮಗೌಡ ಮಾತನಾಡಿ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರನ್ನು ಸಚಿವ ಸ್ಥಾನದಿಂದ ವಜಾಮಾಡಬೇಕು ಹಾಗೂ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅವರನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಜವಳಿ ನಿಗಮದ ಉಪಾಧ್ಯಕ್ಷ ನಜೀರ್‌ ಕಂಗನೊಳ್ಳಿ, ಜಮಖಂಡಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವರ್ಧಮಾನ ನ್ಯಾಮಗೌಡ, ವಕೀಲ ರವಿ ಯಡಹಳ್ಳಿ, ಅಭಯಕುಮಾರ ನಾಂದ್ರೇಕರ, ಸಿದ್ದು ಮೀಸಿ, ಎನ್‌.ಬಿ. ಗಸ್ತಿ, ನಗರಸಭೆ ಸದಸ್ಯೆ ರೇಷ್ಮಾ ಖಾದ್ರಿ, ದುಂಡಪ್ಪ ಸಾವಳಗಿ ಮಾತನಾಡಿದರು. ಸಾವಳಗಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕಲ್ಲಪ್ಪ ಗಿರಡ್ಡಿ, ಅರ್ಜುನ ದಳವಾಯಿ, ಅಕ್ಬರ ಜಮಾದಾರ, ದಾನೇಶ ಘಾಟಗೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.