ADVERTISEMENT

ಸಾಲೇಶ್ವರ ಪತ್ತಿನ ಸಹಕಾರ ಸಂಘಕ್ಕೆ ₹56 ಲಕ್ಷ ಲಾಭ: ಚಂದ್ರಕಾಂತ ಶೇಖಾ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2024, 14:32 IST
Last Updated 22 ಸೆಪ್ಟೆಂಬರ್ 2024, 14:32 IST
ಗುಳೇದಗುಡ್ಡದ ಸಾಲೇಶ್ವರ ಸಹಕಾರಿ ಸಂಘದ 20ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳು ಮತ್ತು ಉತ್ತಮ ಗ್ರಾಹಕರನ್ನು ಸನ್ಮಾನಿಸಲಾಯಿತು
ಗುಳೇದಗುಡ್ಡದ ಸಾಲೇಶ್ವರ ಸಹಕಾರಿ ಸಂಘದ 20ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳು ಮತ್ತು ಉತ್ತಮ ಗ್ರಾಹಕರನ್ನು ಸನ್ಮಾನಿಸಲಾಯಿತು   

ಗುಳೇದಗುಡ್ಡ: ‘ಸಂಘದ ಸರ್ವ ಸದಸ್ಯರ ಹಾಗೂ ಆಡಳಿತ ಮಂಡಳಿಯ ಪರಸ್ಪರ ಸಹಕಾರದಿಂದ 2023-24ನೇ ಸಾಲಿನಲ್ಲಿ ಸಂಘವು ₹ 56 ಲಕ್ಷ ನಿವ್ವಳ ಲಾಭ ಗಳಿಸಿದೆ’ ಎಂದು ಸಂಘದ ಅಧ್ಯಕ್ಷ ಚಂದ್ರಕಾಂತ ಶೇಖಾ ಹೇಳಿದರು.

ಪಟ್ಟಣದ ಸಾಲೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಜರುಗಿದ ಸಾಲೇಶ್ವರ ಪತ್ತಿನ ಸಹಕಾರ ಸಂಘದ 20ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಮಾರ್ಚ್‌ 2023ಕ್ಕೆ ಇದ್ದ ದುಡಿಯುವ ಬಂಡವಾಳ ₹48.45 ಕೋಟಿ, ಮಾರ್ಚ್‌ 2024ಕ್ಕೆ ₹48.67 ಕೋಟಿಯಷ್ಟಾಗಿದೆ.  ಶೇರುದಾರರಿಗೆ ಶೇ 12ರಷ್ಟು ಡಿವಿಡೆಂಡ್ ಕೊಡುವುದಾಗಿ ಘೋಷಣೆ ಮಾಡಿದರು’ ಎಂದರು.

ಬಸವರಾಜ ಪಟ್ಟದಾರ್ಯ ಸ್ವಾಮೀಜಿ ಹಾಗೂ ಗುರುಬಸವದೇವರು ಸಾನ್ನಿಧ್ಯ ವಹಿಸಿ ಮಾತನಾಡಿದರು.

ADVERTISEMENT

ಪ್ರಧಾನ ವ್ಯವಸ್ಥಾಪಕ ಆರ್.ಎನ್.ಜಿಡಗಿ, ಸಂಘದ ಉಪಾಧ್ಯಕ್ಷ ಸಂಗನಬಸಪ್ಪ ಚಿಂದಿ, ನಿರ್ದೇಶಕರಾದ ದೊಡ್ಡಬಸಪ್ಪ ಉಂಕಿ, ಗಂಗಾಧರ ಮದ್ದಾನಿ, ಬಸವರಾಜ ತೊಗರಿ, ಭ್ಯಾಗ್ಯಾ ಉದ್ನೂರ ಮುಂತಾದವರಿದ್ದರು.

ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿಯಲ್ಲಿ ಹೆಚ್ಚಿನ ಅಂಕ ಪಡೆದು ತೇರ್ಗಡೆಯಾದ ಸಂಘದ ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಯಿತು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.