ADVERTISEMENT

ಪಿಯು ಹಂತ ವಿದ್ಯಾರ್ಥಿ ಜೀವನಕ್ಕೆ ದಿಕ್ಸೂಚಿ: ಕಾಶಪ್ಪನವರ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2024, 14:23 IST
Last Updated 29 ಆಗಸ್ಟ್ 2024, 14:23 IST
ಹುನಗುಂದದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾಲೇಜು ಒಕ್ಕೂಟ ಉದ್ಘಾಟನೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ, ನಿವೃತ್ತರಿಗೆ ಸನ್ಮಾನ ಸಮಾರಂಭವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು
ಹುನಗುಂದದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾಲೇಜು ಒಕ್ಕೂಟ ಉದ್ಘಾಟನೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ, ನಿವೃತ್ತರಿಗೆ ಸನ್ಮಾನ ಸಮಾರಂಭವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು   

ಹುನಗುಂದ: ಶಿಸ್ತು, ಬದ್ಧತೆ, ಸಂಯಮ, ಏಕಾಗ್ರತೆಗಳೇ ಯಶಸ್ಸಿನ ಜೀವಾಳಗಳು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರಸಕ್ತ ಸಾಲಿನ ಕಾಲೇಜು ಒಕ್ಕೂಟ, ಎನ್.ಎಸ್.ಎಸ್. ಕಾರ್ಯ ಚಟುವಟಿಕೆ ಉದ್ಘಾಟನೆ, ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ, ನಿವೃತ್ತ ಮತ್ತು ದಾನಿಗಳಿಗೆ ಸತ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನ ಅದರಲ್ಲೂ ಪಿಯು ಹಂತದ ವಿದ್ಯಾರ್ಥಿ ಜೀವನ ಬದುಕಿನಲ್ಲಿ ದಿಕ್ಸೂಚಿ ಅವಧಿಯಾಗಿದ್ದು, ವಿದ್ಯಾರ್ಥಿಗಳು ಏಕಾಗ್ರತೆ ಮೈಗೂಡಿಸಿಕೊಂಡು ಸತತ ಅಧ್ಯಯನದಿಂದ ಉತ್ತಮ ಬದುಕು ಕಟ್ಟಿಕೊಳ್ಳಬೇಕು. ಮಹಿಳಾ ಸಬಲೀಕರಣಕ್ಕೆ ಪೂರಕವಾಗುವಂತೆ ಪಟ್ಟಣದಲ್ಲಿ ಮಹಿಳಾ ಸರ್ಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜು ಸ್ಥಾಪಿಸಲು ಮೊದಲ ಆದ್ಯತೆ ನೀಡಲಾಗುವುದು ಎಂದರು.

ADVERTISEMENT

ತಹಶೀಲ್ದಾರ್ ನಿಂಗಪ್ಪ ಬಿರಾದಾರ ಮಾತನಾಡಿ, ಕಠಿಣ ಪರಿಶ್ರಮದಿಂದ ವಿದ್ಯಾರ್ಥಿ ಜೀವನ ಸಾರ್ಥಕಪಡಿಸಿಕೊಂಡು ಮಾದರಿ ಪ್ರಜೆಗಳಾಗಬೇಕು ಎಂದರು.

ಪ್ರಥಮ ದರ್ಜೆ ಕಾಲೇಜಿನ ಸಿಡಿಸಿ ಉಪಾಧ್ಯಕ್ಷ ವಿಜಯ ಮಹಾಂತೇಶ ಗದ್ದನಕೇರಿಯವರು ಮಾತನಾಡಿ, ಪಟ್ಟಣದಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದ್ದು, ಅದರ ಸದುಪಯೋಗಕ್ಕೆ ಎಲ್ಲರೂ ಕೈಗೂಡಿಸಬೇಕು ಎಂದರು.

ಶಾಸಕ ವಿಜಯಾನಂದ ಕಾಶಪ್ಪನವರ, ತಹಶೀಲ್ದಾರ್ ನಿಂಗಪ್ಪ ಬಿರಾದಾರ, ಸಿದ್ದಲಿಂಗಪ್ಪ ಬೀಳಗಿ ಮತ್ತು ಎಸ್ಕೆ ಕೊನೆಸಾಗರ ಅವರನ್ನು ಕಾಲೇಜಿನ ಪರವಾಗಿ ಸತ್ಕರಿಸಲಾಯಿತು. ಸಿದ್ದಲಿಂಗಪ್ಪ ಬೀಳಗಿ ಮತ್ತು ಎಸ್ಕೆ ಕೊನೆಸಾಗರ ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಹಾಂತೇಶ ಪರೂತಿ ಇದ್ದರು.

ಸೇವಂತಿ ಬೆಣಗಿ ಪ್ರಾರ್ಥಿಸಿದರು. ಪ್ರಭಾರ ಪ್ರಾಚಾರ್ಯ ಎಸ್.ಕೆ. ಹೂಲಗೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿ.ಕೆ. ಶಶಿಮಠ ಪ್ರತಿಜ್ಞಾವಿಧಿ ಬೋಧಿಸಿದರು. ಎನ್.ವೈ. ನದಾಫ ನಿರೂಪಿಸಿದರು. ಎಚ್.ಟಿ.ಅಗಸಿಮುಂದಿನ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.