ADVERTISEMENT

ಬಾಗಲಕೋಟೆ: ₹5.15 ಲಕ್ಷ ಮೊತ್ತದ ನಿಷೇಧಿತ ನೋಟು ಪತ್ತೆ !

ಸಹಾಯಕ ಎಂಜಿನಿಯರ್ ಮನೆಯ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2020, 15:25 IST
Last Updated 22 ಅಕ್ಟೋಬರ್ 2020, 15:25 IST
ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಸಹಾಯಕ ಎಂಜಿನಿಯರ್ ಅಶೋಕ ತೋಪಲಕಟ್ಟಿ ಅವರ ಮನೆ
ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಸಹಾಯಕ ಎಂಜಿನಿಯರ್ ಅಶೋಕ ತೋಪಲಕಟ್ಟಿ ಅವರ ಮನೆ   

ಬಾಗಲಕೋಟೆ: ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾ ಪಂಚಾಯ್ತಿ ಕುಡಿಯುವ ನೀರು ಪೂರೈಕೆ ಹಾಗೂ ನೈರ್ಮಲ್ಯ ಉಪ ವಿಭಾಗದ ಸಹಾಯಕ ಎಂಜಿನಿಯರ್ ಅಶೋಕ ತೋಪಲಕಟ್ಟಿ ಅವರ ಮನೆಯ ಮೇಲೆ ಗುರುವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ನಡೆಸಿದ ದಾಳಿಯ ವೇಳೆ ₹ 5.15 ಲಕ್ಷ ಮೊತ್ತದ ಹಳೆಯ ನಿಷೇಧಿತ ಹಳೆಯ ನೋಟುಗಳು ಪತ್ತೆಯಾಗಿವೆ.

ಬಾಗಲಕೋಟೆಯ ವಿದ್ಯಾಗಿರಿ ಎಂಟನೇ ಕ್ರಾಸ್‌ನಲ್ಲಿರುವ ಅಶೋಕ ಅವರ ಮನೆ, ನವನಗರದ ಸೆಕ್ಟರ್ ನಂ 17ರಲ್ಲಿ ಪತ್ನಿಯ ಹೆಸರಿನಲ್ಲಿರುವ ಮಹಾಲಕ್ಷ್ಮೀಗ್ಯಾಸ್ ಏಜೆನ್ಸಿ ಹಾಗೂ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿ ಮೇಲೆ ಏಕಕಾಲದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಈ ವೇಳೆ ನಿಷೇಧಿತ ನೋಟುಗಳಲ್ಲದೇ ₹5.18 ಲಕ್ಷ ನಗದು, ₹64,53 ಲಕ್ಷ ಮೌಲ್ಯದ ಚಿನ್ನಾಭರಣ, ₹5.54 ಮೊತ್ತದ 8568 ಗ್ರಾಂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಶೋಧನಾ ಕಾರ್ಯ ನಡೆದಿದೆ.

ADVERTISEMENT

ಎಸಿಬಿ ಬೆಳಗಾವಿ ಉತ್ತರ ವಲಯದ ಎಸ್ಪಿ ಬಿ.ಎಸ್.ನೇಮಗೌಡ ನೇತೃತ್ವದಲ್ಲಿಬಾಗಲಕೋಟೆ ಎಸಿಬಿ ಡಿವೈಎಸ್ಪಿ ಗಣಪತಿ ಹಾಗೂ ಸಿಬ್ಬಂದಿ ಒಳಗೊಂಡ ತಂಡ ದಾಳಿ ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.