ಬಾಗಲಕೋಟೆ: ಇಲ್ಲಿನ ಆಲಮಟ್ಟಿಯ ಕೃಷ್ಣಾ ಭಾಗ್ಯ ಜಲನಿಗಮದ ಎಇಇ ರಾಗಪ್ಪ ಲಮಾಣಿ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬುಧವಾರ ಮುಂಜಾನೆ ದಾಳಿ ನಡೆಸಿದ್ದಾರೆ.
ಬಾಗಲಕೋಟೆಯ ವಿದ್ಯಾಗಿರಿ ಹಾಗೂ ಸೀಗಿಕೇರಿಯಲ್ಲಿ ಇರುವ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಎಸಿಬಿ ಡಿಎಸ್ಪಿ ಡಿ. ವೈ. ಗುಣಾಜಿ, ಸಿಪಿಐ ಹರಿಶ್ಚಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಐವರು ಸಿಬ್ಬಂದಿ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.