ಕೆರೂರ: ಪಟ್ಟಣ ಹೊರವಲಯದ ಸರ್ವೇಶ್ವರ ಕೊಳ್ಳದ ಹತ್ತಿರ ಬುಧವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಇಲ್ಲಿನ ಕೆಎಚ್‌ಡಿಸಿ ಕಾಲೊನಿ ನಿವಾಸಿ ಗೋಪಾಲ ಚಿದಾನಂದ ಗೌಡರ (21) ಮೃತಪಟ್ಟಿದ್ದಾರೆ.
ಬೆಳಿಗ್ಗೆ 5.30ಕ್ಕೆ ವಾಯು ವಿಹಾರಕ್ಕೆಂದು ತೆರಳಿದ ಸಂದರ್ಭದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗೋಪಾಲ ಅವರ ತಲೆಗೆ ಬಲವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳಿಯ ಕೆಎಸ್‌ಸಿ–ಆರ್‌ಐ (ಕಿಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾರೆ.
ಅಪಘಾತ ಪಡಿಸಿ ವಾಹನ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾನೆ. ಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.