ADVERTISEMENT

ಬಾಗಲಕೋಟೆ | ಮೌಲ್ವಿ ಮೇಲೆ ಹಲ್ಲೆ ಆರೋಪ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2024, 17:34 IST
Last Updated 18 ಆಗಸ್ಟ್ 2024, 17:34 IST
   

ಬಾಗಲಕೋಟೆ: ನವನಗರದಲ್ಲಿ ಯುವಕರ ಮಧ್ಯ ಉಂಟಾದ ಗಲಾಟೆಯಲ್ಲಿ ಅದೇ ಮಾರ್ಗದಲ್ಲಿ ಹೊರಟಿದ್ದ ಮೌಲ್ವಿ ಒಬ್ಬರ ಮೇಲೆ ಯುವಕರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಭಾನುವಾರ ರಾತ್ರಿ ನವನಗರದ ಸೆಕ್ಟರ್ ನಂಬರ್ 4 ರಲ್ಲಿ ಯುವಕರ ನಡುವೆ ಗಲಾಟೆ ನಡೆದಿದೆ. ಸ್ಕೂಟಿಯಲ್ಲಿ ಹೊರಟಿದ್ದ ಮೌಲ್ವಿ ಮೇಲೆ ಹಲ್ಲೆ ಮಾಡಿದ್ದು, ಕಾರಣ ತಿಳಿದು ಬಂದಿಲ್ಲ.

ಮೌಲ್ವಿ ಮೇಲೆ ಹಲ್ಲೆ ನಡೆದಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನ ಯುವಕರು ನವನಗರ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ತಪ್ಪಿಸ್ಥರ ಬಂಧನಕ್ಕೆ ಒತ್ತಾಯಿಸಿದರು.

ADVERTISEMENT

ಹಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಕಾರ್ತಿಕ್ ಹಾಗೂ ಪ್ರದೀಪ ಎಂಬ ಯುವಕರನ್ನು ಬಂಧಿಸಿದ್ದಾರೆ.

ಹೆಚ್ಚುವರಿ ಎಸ್ಪಿಗಳಾದ ಮಹಾಂತೇಶ್ವರ ಜಿದ್ದಿ, ಪ್ರಸನ್ನ ದೇಸಾಯಿ ನವನಗರ ಠಾಣೆ ಬಳಿ ಸೇರಿದ್ದ ಜನರಿಗೆ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದ ಮೇಲೆ ಜನರು ತೆರಳಿದರು.

ಮುಂಜಾಗ್ರತಾ ಕ್ರಮವಾಗಿ ನವನಗರದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್‌ ಒದಗಿಸಲಾಗಿದೆ.

ನವನಗರದ ಸೆಕ್ಟರ್ ನಂಬರ್ 4 ರಲ್ಲಿ ನಾಲ್ವರ ನಡುವೆ ಜಗಳ ನಡೆದಿದ್ದು, ಮೌಲ್ವಿ ಮೇಲೆ ಹಲ್ಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
-ಅಮರನಾಥ ರೆಡ್ಡಿ, ಎಸ್ಪಿ, ಬಾಗಲಕೋಟೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.