ಮಹಾಲಿಂಗಪುರ: ‘ಸಿದ್ಧಾರೂಢರ ತತ್ವ, ಚಿಂತನೆ, ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದ ಸಹಜಾನಂದ ಸ್ವಾಮೀಜಿ ಹೇಳಿದರು.
ಪಟ್ಟಣದ ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದಲ್ಲಿ ಶನಿವಾರ ನಡೆದ ವಾರದ ಸತ್ಸಂಗ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.
‘ಯಾರು ಧರ್ಮವನ್ನು ರಕ್ಷಿಸುತ್ತಾರೋ ಅವರನ್ನು ಧರ್ಮವು ರಕ್ಷಿಸುತ್ತದೆ. ಮಾನವ ಜನ್ಮವನ್ನು ವ್ಯರ್ಥ ಕಾಲಹರಣದಲ್ಲಿ ಕಳೆಯದೇ ನಿತ್ಯ ಜಪ, ತಪ, ದಾನ, ಧರ್ಮ, ದಾಸೋಹ, ಅಧ್ಯಾತ್ಮ ಚಿಂತನೆಗಳ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಬೇಕು’ ಎಂದರು.
ಮುಖಂಡ ಲಕ್ಕಪ್ಪ ಚಮಕೇರಿ ದಂಪತಿ ತುಲಾಭಾರ ಕಾರ್ಯಕ್ರಮ ನಡೆಯಿತು. ರನ್ನ ಬೆಳಗಲಿಯ ಸಿದ್ಧಾರೂಢಮಠದ ಸಿದ್ಧರಾಮ ಶಿವಯೋಗಿ ಮಾತನಾಡಿದರು. ಕಂಕಣವಾಡಿಯ ಮಾರುತಿ ಶರಣರು, ರನ್ನಬೆಳಗಲಿಯ ಸದಾಶಿವ ಗುರೂಜಿ, ಮಲ್ಲೇಶಪ್ಪ ಕಟಗಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.