ADVERTISEMENT

ಮಕ್ಕಳಿಗೆ ಸಂಸ್ಕಾರ ಕಲಿಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 30 ಮೇ 2025, 14:20 IST
Last Updated 30 ಮೇ 2025, 14:20 IST
ಜಮಖಂಡಿ ನಗರದ ಶಾಸಕರ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಸಸಿಗೆ ನೀರೆರೆಯುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಗಣ್ಯರು ಚಾಲನೆ ನೀಡಿದರು
ಜಮಖಂಡಿ ನಗರದ ಶಾಸಕರ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಸಸಿಗೆ ನೀರೆರೆಯುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಗಣ್ಯರು ಚಾಲನೆ ನೀಡಿದರು   

ಜಮಖಂಡಿ: ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಾರೀರಿಕ ಹಾಗೂ ಮಾನಸಿಕವಾಗಿ ಸದೃಢವಾಗಬೇಕು. ಮನೆಯಿಂದಲೇ ಮಕ್ಕಳಿಗೆ ಸಂಸ್ಕಾರ ನೀಡುವ ಕೆಲಸ ಆಗಬೇಕಿದೆ’ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.

ನಗರದ ಶಾಸಕರ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ಹೂ ನೀಡಿ, ಸಿಹಿ ತಿನ್ನಿಸಿ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿ ಮಾತನಾಡಿದರು.

ಬಿಇಒ ಅಶೋಕ ಬಸಣ್ಣವರ ಮಾತನಾಡಿ, ‘ಪಾಲಕರಿಗೆ ಸರ್ಕಾರಿ ಶಾಲೆಯ ಬಗ್ಗೆ ತಾತ್ಸಾರ ಕಡಿಮೆ ಆಗಬೇಕು. ನಮ್ಮ ತಾಲ್ಲೂಕಿನಲ್ಲಿ ಶೇ 70ರಷ್ಟು ಮಕ್ಕಳು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಿಕ್ಷಕರು ಉತ್ತಮ ರೀತಿಯಿಂದ ಕೆಲಸ ಮಾಡುತ್ತಿದ್ದಾರೆ’ ಎಂದರು.

ADVERTISEMENT

ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಹಾಗೂ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಪ್ರಾಚಾರ್ಯ ಹುಸೇನಮಿಯ್ಯಾ, ನರಸಿಂಹ ಕಲ್ಲೊಳ್ಳಿ, ಬಿ.ಎಂ.ಕುರುವಿನಶೆಟ್ಟಿ, ನಾಗಪ್ಪ ಸನದಿ, ಸಿದ್ದಪ್ಪ ಕಡಕೋಳ, ಮುಖ್ಯಶಿಕ್ಷಕಿ ಶೋಭಾ ಸಾಳುಂಕೆ, ವೆಂಕಟೇಶ ಕಮ್ಮಾರ, ವಿನೋದ ಮಾಸರೆಡ್ಡಿ, ಕುಮಾರ ಬಾಗೇವಾಡಿ, ಅಭಜೀತ ಶಾ, ಬಾಲಕೃಷ್ಣ ಕಲಾಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.