ಮುಧೋಳ: ಲೋಕಸಭೆ ಚುನಾವಣೆ ಹಿನ್ನೆಲೆ ತಾಲ್ಲೂಕಿನ ಮತಗಟ್ಟೆಗಳಲ್ಲಿ ಮಂಗಳವಾರ ಬೆಳಿಗ್ಗೆ 7 ರಿಂದ ಸಂಜೆ 6ರ ವರೆಗೆ ನಡೆಯಲಿರುವ ಮತದಾನ ಪ್ರಕ್ರಿಯೆಗಾಗಿ ಸೋಮವಾರ ನಗರದ ಆರ್‌ಎಂಜಿ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆಯಿತು.
ತಾಲ್ಲೂಕಿನ ಒಟ್ಟು 212 ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಚುನಾವಣೆ ನಿಯೋಜಿತ ಸಿಬ್ಬಂದಿ ತಮ್ಮ ತಮ್ಮ ಮತಗಟ್ಟೆಗೆ ತೆರಳಲು ಅಗತ್ಯವಿರುವ ಚುನಾವಣೆ ಪರಿಕರಗಳೊಂದಿಗೆ ಸಾಗುತ್ತಿರುವ ದೃಶ್ಯ ಕಂಡುಬಂದಿತು.
ಬೆಳಿಗ್ಗೆಯಿಂದಲೇ ಮಸ್ಟರಿಂಗ್ ಕಾರ್ಯಗಳನ್ನು ಪೂರ್ಣಗೊಳಿಸಿ ಮಧ್ಯಾಹ್ನದ ವೇಳೆಗೆ ಬಸ್‌ಗಳ ಮೂಲಕ ತಮಗೆ ನಿಗಿದಿಪಡಿಸಿದ ಮತಗಟ್ಟೆಗಳಿಗೆ ತೆರಳಿದರು.
ಚುನಾವಣೆ ಕರ್ತವ್ಯಕ್ಕೆಂದು ಸಿಬ್ಬಂದಿ ಅನುಕೂಲಕ್ಕಾಗಿ ಕೆಎಸ್ಆರ್‌ಟಿಸಿಯಿಂದ ಒಟ್ಟು 31 ಬಸ್‌ಗಳನ್ನು ನಿಯೋಜಿಸಲಾಗಿದೆ. ಅದೇ ರೀತಿ ಅಗತ್ಯವಿರುವ ಕಡೆಯಲ್ಲಿ ಖಾಸಗಿ ವಾಹನಗಳ ಬಳಕೆ ಮಾಡಿಕೊಳ್ಳಲಾಗಿದೆ.
ಪ್ರತಿ ಮತಗಟ್ಟೆಗೆ 6 ಸಿಬ್ಬಂದಿಯನ್ನು ನಿಯೋಜಿಸಿದ್ದು, ಮತದಾರರಿಗೆ ಅಗತ್ಯ ಮಾಹಿತಿ ನೀಡಲಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಹುಲ್ಲುಮನೆ ತಿಮ್ಮಣ್ಣ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.