ಜಮಖಂಡಿಯ ಬಾಗಲಕೋಟೆ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ ಮಾತನಾಡಿದರು
ಜಮಖಂಡಿ: ‘ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದ ಮೂಲಕ ಸಮಸಮಾಜ ನಿರ್ಮಾಣದ ಸಂದೇಶವನ್ನು ಜಗತ್ತಿಗೆ ತೋರಿಸಿದರು, ಆ ಮೂಲಕ ಬಡ ಸಮುದಾಯಗಳ ಪ್ರಗತಿಗೆ ಶ್ರಮಿಸಿದರು’ ಎಂದು ವಿಧಾನಪರಿಷತ ಸದಸ್ಯ ಹಣಮಂತ ನಿರಾಣಿ ಹೇಳಿದರು.
ಇಲ್ಲಿನ ಬಾಗಲಕೋಟೆ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ಬುದ್ಧ, ಬಸವ, ಡಾ.ಬಿ.ಆರ್.ಅಂಬೇಡ್ಕರ್ ಸಮಸಮಾಜದ ಮೌಲ್ಯಗಳು ಕುರಿತು ಒಂದು ದಿನದ ವಿಚಾರ ಸಂಕೀರಣದಲ್ಲಿ ಮಾತನಾಡಿ, ನಾಲ್ಕನೇ ಶತಮಾನದಲ್ಲಿ ಬುದ್ಧ, 12ನೇ ಶತಮಾನದಲ್ಲಿ ಬಸವ ಹಾಗೂ 19ನೇ ಶತಮಾನದಲ್ಲಿ ಅಂಬೇಡ್ಕರ್ ಅವರು ಸಮಾಜದಲ್ಲಿ ಸಮಾನತೆ ಪ್ರತಿಪಾದಿಸಿದ್ದಾರೆ’ ಎಂದರು.
ಬಾಗಲಕೋಟೆ ವಿಶ್ವವಿದ್ಯಾಲಯದ ಕುಲಪತಿ ಆನಂದ ದೇಶಪಾಂಡೆ ಅಧ್ಯಕ್ಷತೆ ವಹಿಸಿ ಮಾತನಾಡಿ ಬುದ್ಧ, ಬಸವ, ಡಾ.ಬಿ.ಆರ್.ಅಂಬೇಡ್ಕರ್ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ತಿಳಿಸಿದರು.
ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಬಿ.ಕೆ.ರವಿ, ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಎಸ್.ಎಚ್.ಜಂಗಮಶೆಟ್ಟಿ, ಕೊಡಗು ವಿಶ್ವವಿದ್ಯಾಲಯದ ಕುಲಪತಿ ಅಶೋಕ ಆಲೂರ, ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಎಂ.ಆರ್.ಗಂಗಾಧರ, ಪುಣೆಯ ಬಸವ ಅರುವು ಹಾಗೂ ಸಂಶೋಧನಾ ಕೇಂದ್ರದ ಡಾ.ಶಶಿಕಾಂತ ಪಟ್ಟಣ, ಕುಲಸಚಿವ ಡಾ.ಔದ್ರಾಮ, ಮಲ್ಲಿಕಾರ್ಜುನ ಮರಡಿ, ಚಿದಾನಂದ ಡವಳೇಶ್ವರ, ಮಲ್ಲಿಕಾರ್ಜುನ ಬಿದರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.