ADVERTISEMENT

ಅಮೀನಗಡ | ಗ್ಯಾರಂಟಿ ಯೋಜನೆಗಳ ಸದುಪಯೋಗವಾಗಲಿ: ನೂರಂದಗೌಡ ಕಲಗೋಡಿ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2025, 4:10 IST
Last Updated 21 ಡಿಸೆಂಬರ್ 2025, 4:10 IST
ಅಮೀನಗಡ ಸಮೀಪದ ಹಿರೇಮಾಗಿ ಗ್ರಾಮದಲ್ಲಿ ಶನಿವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುಂದು ಕೊರತೆ ಸಭೆಯಲ್ಲಿ ತಾಲ್ಲೂಕು ಅಧ್ಯಕ್ಷ ನೂರಂದಗೌಡ ಕಲಗೋಡಿ ಮಾತನಾಡಿದರು
ಅಮೀನಗಡ ಸಮೀಪದ ಹಿರೇಮಾಗಿ ಗ್ರಾಮದಲ್ಲಿ ಶನಿವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುಂದು ಕೊರತೆ ಸಭೆಯಲ್ಲಿ ತಾಲ್ಲೂಕು ಅಧ್ಯಕ್ಷ ನೂರಂದಗೌಡ ಕಲಗೋಡಿ ಮಾತನಾಡಿದರು   

ಅಮೀನಗಡ: ತಾಲ್ಲೂಕು ಪಂಚಾಯಿತಿ ವತಿಯಿಂದ ಶನಿವಾರ ತಾಲ್ಲೂಕು ವ್ಯಾಪ್ತಿಯ ಹಿರೇಮಾಗಿ ಹಾಗೂ ಮೂಗನೂರು ಗ್ರಾಮಗಳಲ್ಲಿ ತಾಲ್ಲೂಕು ಮಟ್ಟದ ಪಂಚಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯಿಂದ ಕುಂದು ಕೊರತೆ ಸಭೆ ನಡೆಯಿತು.

ಹಿರೇಮಾಗಿ ಗ್ರಾಮದಲ್ಲಿ ನಡೆದ ಕುಂದು ಕೊರತೆ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಹುನಗುಂದ ತಾಲ್ಲೂಕು ಘಟಕದ ಅಧ್ಯಕ್ಷ ನೂರಂದಗೌಡ ಕಲಗೋಡಿ ಮಾತನಾಡಿ, ರಾಜ್ಯ ಸರ್ಕಾರವು ಹಿಂದುಳಿದ ವರ್ಗ, ಮಹಿಳಾ ಸಬಲೀಕರಣಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಯೋಜನೆಗಳ ಅನುಷ್ಠಾನದಲ್ಲಿ ಏನೇ ಸಮಸ್ಯೆಗಳಿದ್ದರೂ ಆಲಿಸುವ ನಿಟ್ಟಿನಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅರ್ಹ ಫಲಾನುಭವಿಗಳ ಸಭೆ ನಡೆಸಲಾಗುತ್ತಿದೆ. ಗೃಹ ಲಕ್ಷ್ಮಿ, ಉಚಿತ ವಿದ್ಯುತ್, ಅನ್ನಭಾಗ್ಯ, ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳನ್ನು ಆಯಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ADVERTISEMENT

ಬಾಗಲಕೋಟೆಯಿಂದ ಹಿರೇಮಾಗಿ ಮಾರ್ಗಕ್ಕೆ ಬರುವ ಬಸ್ ಸಂಚಾರದಲ್ಲಿ ತೊಂದರೆಯಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಸಂಪರ್ಕಿಸಿ ಸಮಸ್ಯೆ ಸರಿಪಡಿಸುವಂತೆ ಸೂಚಿಸಿದರು.

ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನದ ಬಾಗಲಕೋಟೆ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎನ್. ರಾಂಪುರ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಎಂ.ಎಸ್. ಚಲವಾದಿ ಪ್ರಾಸ್ತವಿಕವಾಗಿ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೀಲಮ್ಮ ಹುಲ್ಲಿಕೇರಿ, ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸದಸ್ಯ ಸುರೇಶ ಹಳಪೇಟಿ, ಶಿವು ಹೊನ್ನಳ್ಳಿ, ಸುಲೋಚನಾ ಬಿರಾದಾರ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಂಜುಳಾ ಗುನಾರಿ, ಹೆಸ್ಕಾಂನ ರಮೇಶ್ ನಾಯಕ, ಆಹಾರ ಇಲಾಖೆಯ ಎಸ್.ಎಂ. ಬಡ್ಡಿ, ಎಸ್.ಎಂ. ಆನೆಹೊಸೂರ, ಪಿಡಿಒ ಎಸ್.ಎಂ. ಮೇಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.