ADVERTISEMENT

ನಿರಾಣಿ ಸಮೂಹದಿಂದ ಅಂಕಿತಾಗೆ ₹2 ಲಕ್ಷ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 19 ಮೇ 2024, 14:27 IST
Last Updated 19 ಮೇ 2024, 14:27 IST
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಕೊಣ್ಣೂರ ಅವರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ₹2 ಲಕ್ಷ ನಗದು ಪುರಸ್ಕಾರ ನೀಡಿದರು
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಕೊಣ್ಣೂರ ಅವರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ₹2 ಲಕ್ಷ ನಗದು ಪುರಸ್ಕಾರ ನೀಡಿದರು   

ಬಾಗಲಕೋಟೆ: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆ ಅನಂತವಾಗಿದೆ. ಶ್ರದ್ಧೆ, ದೃಢ ನಿರ್ಧಾರ, ಸತತ ಪರಿಶ್ರಮ ಇದ್ದರೆ ಯಶಸ್ಸು ಸಾಧ್ಯ ಎಂಬುದಕ್ಕೆ ವಜ್ಜರಮಟ್ಟಿಯ ಅಂಕಿತಾ ಕೊಣ್ಣೂರ ಸಾಕ್ಷಿಯಾಗಿದ್ದಾಳೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಹೇಳಿದರು.

ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಮೆಳ್ಳಿಗೇರಿ ಮುರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಅಂಕಿತಾ ಅವರಿಗೆ ₹2 ಲಕ್ಷ ನಗದು ಪುರಸ್ಕಾರ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನಿರಾಣಿ ಸಮೂಹವು ಆರ್ಥಿಕ ನೆರವು ನೀಡಲು ಸಿದ್ಧವಿದೆ ಎಂದರು.

ವಿದ್ಯಾರ್ಥಿ ಬಯಸಿದಲ್ಲಿ ಬಾಗಲಕೋಟೆಯ ತೇಜಸ್ ಅಂತರರಾಷ್ಟ್ರೀಯ ಪಿಯು ಕಾಲೇಜಿನಲ್ಲಿ ಉಚಿತ ಶಿಕ್ಷಣದ ಜೊತೆಗೆ ಭವಿಷ್ಯದ ಉನ್ನತ ವ್ಯಾಸಂಗದ ಖರ್ಚು ಸಹ ನಿರಾಣಿ ಸಮೂಹದಿಂದ ನೋಡಿಕೊಳ್ಳಲಾಗುವುದು ಎಂದು ಪಾಲಕರಿಗೆ ತಿಳಿಸಿದರು.

ADVERTISEMENT

ಟ್ರ್ಯೂ ಆಲ್ಟ್ ವ್ಯವಸ್ಥಾಪಕ ನಿರ್ದೇಶಕ ವಿಜಯ ನಿರಾಣಿ ವಿದ್ಯಾರ್ಥಿನಿಗೆ ಶುಭ ಕೋರಿದರು. ಎಂ.ಆರ್.ಎನ್. ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಸಂಗಮೇಶ ನಿರಾಣಿ, ನಿರ್ದೇಶಕ ವಿಶಾಲ ನಿರಾಣಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.