ಬಾಗಲಕೋಟೆ: ಅಂತರರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮುಕ್ತ ದಿನ ಅಂಗವಾಗಿ ಜಿಲ್ಲೆಯಾದ್ಯಂತ ವಿವಿಧ ಶಾಲಾ, ಕಾಲೇಜಿನ 4 ಲಕ್ಷ ಮಕ್ಕಳಿಗೆ ಗುರುವಾರ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಪ್ರತಿಜ್ಞಾವಿಧ ಸ್ವೀಕಾರ ಕಾರ್ಯಕ್ರಮ ನವನಗರದ ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆಯಿತು.
ಜಿಲ್ಲಾಧಿಕಾರಿ ಸಂಗಪ್ಪ ಎಂ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಶಾಲಾ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಮಾದಕ ದ್ರವ್ಯ ವ್ಯಸನ ಮುಕ್ತ ರಾಷ್ಟ್ರ ನಿರ್ಮಾಣ ಮಾಡಲು ನಾವು ಗಾಂಜಾ, ಅಫೀಮುದಂತಹ ಮಾದಕ ದ್ರವ್ಯಗಳನ್ನು ಸೇವಿಸುವುದಿಲ್ಲ. ಇತರರು ಸೇವಿಸದಂತೆ ಶ್ರಮಿಸುತ್ತೇವೆ ಎಂದು, ಅಕ್ರಮ ಮಾದಕ ದ್ರವ್ಯಗಳ ಬಗ್ಗೆ ಮಾಹಿತಿ ಬಂದಲ್ಲಿ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡುವ ಮೂಲಕ ಮಾದಕ ದ್ರವ್ಯ ವ್ಯಸನ ಮುಕ್ತ ರಾಷ್ಟ್ರವನ್ನಾಗಿ ಮಾಡಲು ಪಣತೊಡುತ್ತೇವೆ ಎಂದು ಪ್ರತಿಜ್ಞೆ ಮಾಡಿದರು
ಜಿಲ್ಲಾಧಿಕಾರಿ ಸಂಗಪ್ಪ ಎಂ. ಮಾತನಾಡಿ, ಅಪ್ರಾಪ್ತ ವಯಸ್ಸಿನಲ್ಲಿ ಮಾದಕ ವ್ಯಸನಕ್ಕೆ ತುತ್ತಾದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರಿ ಕಿನ್ನತೆಗೆ ಒಳಗಾಗುತ್ತಾರೆ. ಇದರಿಂದ ಮಕ್ಕಳ ಬೆಳೆವಣಿಗೆಯಲ್ಲಿ ಕುಂಠಿತಗೊಳ್ಳುಚುದಲ್ಲದೇ ಕುಟುಂಬದ ಸ್ವಾಸ್ಥ್ಯ ಹಾಳಾಗುತ್ತದೆ. ಸಾಮಾಜಿಕ, ಶೈಕ್ಷಣಿಕವಾಗಿ ಪ್ರಗತಿಹೊಂದಲು ಸಾಧ್ಯವಾಗುವುದಿಲ್ಲ ಎಂದರು.
ಅಲ್ಪಸಂಖ್ಯಾತರ ವಸತಿ ಶಾಲೆ ಹಾಗೂ ಕಾಲೇಜಿನ ಪ್ರಾಚಾರ್ಯರಾದ ರಾಜೇಶ್ವರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.