ADVERTISEMENT

ಬಾಗಲಕೋಟೆ: ಅಕ್ರಮ ಮಸೀದಿ ನಿರ್ಮಾಣ ತಡೆಯಲು ಮನವಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 4:05 IST
Last Updated 9 ಜುಲೈ 2025, 4:05 IST
ಹಳೆ ಬಾಗಲಕೋಟೆಯಲ್ಲಿ ನಿರ್ಮಿಸುತ್ತಿರುವ ಅಕ್ರಮ ಮಸೀದಿ ನಿರ್ಮಾಣ ತಡೆಯಬೇಕೆಂದು ಆಗ್ರಹಿಸಿ ಅಲ್ಲಿನ ನಿವಾಸಿಗಳು ಪೌರಾಯುಕ್ತ ವಾಸಣ್ಣ ಅವರಿಗೆ ಮನವಿ ಸಲ್ಲಿಸಿದರು
ಹಳೆ ಬಾಗಲಕೋಟೆಯಲ್ಲಿ ನಿರ್ಮಿಸುತ್ತಿರುವ ಅಕ್ರಮ ಮಸೀದಿ ನಿರ್ಮಾಣ ತಡೆಯಬೇಕೆಂದು ಆಗ್ರಹಿಸಿ ಅಲ್ಲಿನ ನಿವಾಸಿಗಳು ಪೌರಾಯುಕ್ತ ವಾಸಣ್ಣ ಅವರಿಗೆ ಮನವಿ ಸಲ್ಲಿಸಿದರು   

ಬಾಗಲಕೋಟೆ: ಇಲ್ಲಿನ ದಡ್ಡೆನ್ನವರ ಆಸ್ಪತ್ರೆ ಪಕ್ಕದಲ್ಲಿರುವ ಬಡಾವಣೆಯಲ್ಲಿ ಅನುಮತಿ ಇಲ್ಲದಿದ್ದರೂ ನಿರ್ಮಿಸುತ್ತಿರುವ ಮಸೀದಿ ನಿರ್ಮಾಣ ಕಾರ್ಯವನ್ನು ತಡೆಯಬೇಕು ಎಂದು ಆಗ್ರಹಿಸಿ ಅಲ್ಲಿನ ನಿವಾಸಿಗಳು ನಗರಸಭೆ ಪೌರಾಯುಕ್ತರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಈಗಾಗಲೇ ಅನೇಕ ಬಾರಿ ಮನವಿ ಸಲ್ಲಿಸಿದರೂ ತಡೆದಿಲ್ಲ. ಮಸೀದಿ ನಿರ್ಮಾಣಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ನಗರಸಭೆಯಲ್ಲಿ ಇದಕ್ಕೆ ಅನುಮತಿ ದೊರೆತಿಲ್ಲ. ಹತ್ತಿರದಲ್ಲೇ ಆಸ್ಪ‍ತ್ರೆ, ಶಾಲಾ–ಕಾಲೇಜು, ಜನ ವಸತಿಗಳಿವೆ. ಧ್ವನಿವರ್ಧಕದಿಂದ ಆಸ್ಪತ್ರೆ ರೋಗಿಗಳಿಗೆ ತೊಂದರೆಯಾಗಲಿದೆ ಎಂದು ಮನವಿಯಲ್ಲಿ ದೂರಿದ್ದಾರೆ.

ವಿದ್ಯಾಗಿರಿಯ ನಾಲ್ಕನೇ ರಸ್ತೆ, ಆಶ್ರಯ ಬಡಾವಣೆ, ಕೊಳಚೆ ನಿರ್ಮೂಲನಾ ಮಂಡಳಿ ಸೇರಿದಂತೆ ಹಲವು ಕಡೆಗಳಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಲಾಗುತ್ತಿದೆ. ಕೂಡಲೇ ನಗರಸಭೆ ಅಧಿಕಾರಿಗಳು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಮುಖಂಡ ಕುಮಾರಸ್ವಾಮಿ ಹಿರೇಮಠ, ಮಸೀದಿ ಕುರಿತು ತೀರ್ಮಾನ ಕೈಗೊಳ್ಳಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಅಷ್ಟರಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಗರಸಭೆಯ ಎಲ್ಲ ಪಕ್ಷದ ಸದಸ್ಯರೂ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು. ಕ್ರಮಕೈಗೊಳ್ಳದಿದ್ದರೆ ನಗರಸಭೆ ಅಧ್ಯಕ್ಷೆ ಮನೆ ಹಾಗೂ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ನಗರಸಭೆ ಪೌರಾಯುಕ್ತ ವಾಸಣ್ಣ ಮಾತನಾಡಿ, ವೀಕ್ಷಣೆಗೆ ಅಧಿಕಾರಿಗಳನ್ನು ಕಳುಹಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ನಗರಸಭೆ ಸದಸ್ಯರಾದ ಶಶಿಕಲಾ ಮಜ್ಜಗಿ, ಸ್ಮಿತಾ ಪವಾರ್, ಮುಖಂಡ ಈರಣ್ಣ ಲಾಯಗುಂದಿ, ಸುರೇಶ ಮಜ್ಜಗಿ, ನಾಗರಾಜ ಅಂಬಿಗೇರ, ಚಂದ್ರು ರಾಮವಾಡಗಿ, ನಾಗರಾಜ ಹೊರಕೇರ, ಶಂಕರ ಕದಂ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.