ಬಾಗಲಕೋಟೆ: ಆರೋಗ್ಯ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಪರಿಕರಗಳ ಖರೀದಿಯಲ್ಲಿ ಆಗಿರುವ ₹2 ಸಾವಿರ ಮೊತ್ತದ ಅವ್ಯವಹಾರದ ತನಿಖೆಗೆ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಭ್ರಷ್ಟಾಚಾರ ನಡೆದಿಲ್ಲ ಎನ್ನುವುದಾದರೆ ಖರೀದಿ ವಹಿವಾಟಿನ ಸಮಗ್ರ ಮಾಹಿತಿ ಶ್ವೇತಪತ್ರ ಹೊರಡಿಸಿ ಎಂದು ಒತ್ತಾಯಿಸಿದ ಅವರು, ಹಗರಣ ತನಿಖೆ ವಿಚಾರದಲ್ಲಿ ಸರ್ಕಾರ ಹೀಗೆಯೇ ತನ್ನ ಮೊಂಡು ಧೋರಣೆ ಮುಂದುವರೆಸಿದಲ್ಲಿ ಮುಂಬರುವ ಅಧಿವೇಶನದಲ್ಲಿ ಪಕ್ಷದ ವತಿಯಿಂದ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.